ಬೆಳಗಾವಿ: ‘ಬೆಳಗಾವಿಯಲ್ಲಿ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಿದ್ದು, ಐಟಿ ಉದ್ಯಮ ಬೆಳವಣಿಗೆಗೆ ಇದು ಪೂರಕವಾಗಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಒದಗಿಸಲಿದೆ’ ಎಂದು ವಿದ್ಯುನ್ಮಾನ ಮತ್ತು ಐಟಿ, ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ ಭರವಸೆ ನೀಡಿದರು.

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆ-ಡಿಇಎಂ)ನ ‘ಬಿಯಾಂಡ್ ಬೆಂಗಳೂರು’ ಉಪಕ್ರಮ ಅಂಗವಾಗಿ ಇಲ್ಲಿ ಬುಧವಾರ ನಡೆದ ‘ಸಿಇಒಗಳ ದುಂಡುಮೇಜಿನ ಶೃಂಗಸಭೆ’ಯಲ್ಲಿ ಅವರು ಮಾತನಾಡಿದರು.

‘ರಾಜ್ಯದ ವಿವಿಧೆಡೆ ಸಾಕಷ್ಟು ಜಮೀನು ಲಭ್ಯವಿದೆ. ಐಟಿ–ಬಿಟಿ ಉದ್ಯಮದ ಬೆಳವಣಿಗೆಗೆ ಸರ್ಕಾರದಿಂದ ಅಗತ್ಯ ಜಮೀನು ಒದಗಿಸಲಾಗುವುದು. ಬೆಂಗಳೂರು ಹೊರತುಪಡಿಸಿ ಇತರ ಭಾಗದಲ್ಲಿ ಐಟಿ ಕ್ಷೇತ್ರದ ಅಭಿವೃದ್ಧಿ ಗೆ ಪ್ರೋತ್ಸಾಹ ಒದಗಿಸಲಾಗುತ್ತದೆ. ಕೇಂದ್ರ ಸರ್ಕಾರದ ಮಾದರಿಯಲ್ಲಿ ಸಹಾಯ ಹಾಗೂ ಪ್ರೋತ್ಸಾಹ ಧನವನ್ನು ಒದಗಿಸಲಾಗುತ್ತಿದೆ. ಇದನ್ನು ಬಳಸಿಕೊಂಡು ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ಇತರ ಭಾಗಗಳಲ್ಲಿ ಐಟಿ ಉದ್ಯಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಉದ್ಯಮಿಗಳು ಕೈಜೋಡಿಸಬೇಕು’ ಎಂದು ಕೋರಿದರು.

‘ಧಾರವಾಡದ ಬೇಲೂರು ಪ್ರದೇಶದಲ್ಲಿ ಕ್ಲಸ್ಟರ್ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಇನ್ನೆರಡು ತಿಂಗಳಲ್ಲಿ ಅಂತಿಮಗೊಳಿಸಲಾಗುವುದು’ ಎಂದು ತಿಳಿಸಿದರು.

ಐಟಿ ನಿರ್ದೇಶಕಿ ಮೀನಾ ನಾಗರಾಜ್, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಅಧ್ಯಕ್ಷ ಬಿ.ವಿ. ನಾಯ್ಡು, ಟಿಸಿಎಸ್ ರಾಜ್ಯ ವಿಭಾಗದ ಮುಖ್ಯಸ್ಥ ಸುನಿಲ್ ದೇಶಪಾಂಡೆ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಐಟಿ–ಬಿಟಿ ಕ್ಷೇತ್ರದ ಉದ್ಯಮಿಗಳು, ಪ್ರಮುಖ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.