ಅಥಣಿ: ‘ಆರೋಗ್ಯ ಸಂಪತ್ತು ದೊಡ್ಡದಾಗಿದ್ದು, ಅದನ್ನು ಕಾಪಾಡಿಕೊಳ್ಳಬೇಕು’ ಎಂದು ಶಾಸಕ ಮಹೇಶ ಕುಮಠಳ್ಳಿ ಹೇಳಿದರು.

ಇಲ್ಲಿನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಬಳಿ ಶನಿವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಉಚಿತ ಆರೋಗ್ಯ ಮೇಳ ಹಾಗೂ ರಾಷ್ಟ್ರೀಯ ಕಾರ್ಯಕ್ರಮಗಳ ಜಾಗೃತಿ ಅಭಿಯಾನ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಆರೋಗ್ಯದ ಬಗ್ಗೆ ಎಂದಿಗೂ ನಿರ್ಲಕ್ಷ್ಯ ಮಾಡಬಾರದು. ದೈಹಿಕ ಮತ್ತು ಮಾನಸಿಕ ಆರೋಗ್ಯದತ್ತ ಗಮನಹರಿಸಬೇಕು’ ಎಂದರು.

ಚಿಕ್ಕೋಡಿಯ ಎಡಿಎಚ್‌ಇ ಡಾ.ಶರಣಪ್ಪ ಗಡೇದ ಮಾತನಾಡಿ, ‘ಜಗತ್ತಿನಲ್ಲೇ ಅರೋಗ್ಯವಂತ ದೇಶ ಕಟ್ಟಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಯುಷ್ಮಾನ್ ಭಾರತ ಆರೋಗ್ಯ ಯೋಜನೆ ಜಾರಿಗೆ ತಂದಿದ್ದಾರೆ. ಯೋಜನೆಯನ್ನು ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

ವಿವಿಧ ಯೋಜನೆಗಳಲ್ಲಿ ಸೌಲಭ್ಯ ವಿತರಣೆಗೆ ಚಾಲನೆ ನೀಡಲಾಯಿತು.

ಸಾನ್ನಿಧ್ಯ ವಹಿಸಿದ್ದ ಗಚ್ಚಿನ ಮಠದ ಶಿವಬಸವ ಸ್ವಾಮೀಜಿ ಮಾತನಾಡಿದರು. ತಹಶೀಲ್ದಾರ್ ದುಂಡಪ್ಪ ಕೋಮಾರ, ತಾ.ಪಂ. ಇಒ ಶೇಖರ ಕರಬಸಪ್ಪಗೋಳ, ಸಮಾಜ ಕಲ್ಯಾಣ ಅಧಿಕಾರಿ ಪ್ರವೀಣಕುಮಾರ ಪಾಟೀಲ, ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಅಶೋಕ ಕಾಂಬಳೆ, ತಾಲ್ಲೂಕು ನೋಡಲ್ ಅಧಿಕಾರಿ ಡಾ.ಅನಿಲ್ ಕೊರಬು, ಪಿಎಸ್ಐ ಕುಮಾರ ಹಾಡಕರ, ಸರ್ಕಾರಿ ನೌಕರರ ಸಂಘ ತಾಲ್ಲೂಕು ಘಟಕದ ಅಧ್ಯಕ್ಷ ರಾಮಣ್ಣ ಧರಿಗೌಡರ ಇದ್ದರು.

ಟಿಎಚ್‌ಒ ಡಾ.ಬಸಗೌಡ ಕಾಗೆ ಸ್ವಾಗತಿಸಿದದರು. ಶಿಕ್ಷಕ ಸಂಗಮೇಶ ಹಚ್ಚಡದ ನಿರೂಪಿಸಿದರು. ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಸಿ.ಎಸ್. ಪಾಟೀಲ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.