ಬೆಳಗಾವಿ: ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಯಿಂದ ಬೆಳಗಾವಿಯ ಕೆಎಲ್ಇಎಸ್ ಆಸ್ಪತ್ರೆಗೆ ಶುಕ್ರವಾರ ನಸುಕಿನಲ್ಲಿ ಹೃದಯ ಸಾಗಿಸುವಲ್ಲಿ ವೈದ್ಯರ ತಂಡ ಯಶಸ್ವಿಯಾಯಿತು.

ಆಪಘಾತದಿಂದಾಗಿ ಎಸ್.ಡಿ.ಎಂ ಆಸ್ಪತ್ರೆಗೆ ದಾಖಲಿಸಿದ್ದ ವ್ಯಕ್ತಿಯೊಬ್ಬರ ಮಿದುಳು ನಿಷ್ಕ್ರಿಯಗೊಂಡಿತ್ತು. ಅವರ ಕುಟುಂಬ ವರ್ಗದವರೊಂದಿಗೆ ಚರ್ಚಿಸಿದ ವೈದ್ಯರು ಹೃದಯ ದಾನ ಮಾಡಲು ಪ್ರೇರೇಪಿಸಿದರು.

ಶುಕ್ರವಾರ ನಸುಕಿನ 4ರ ಸುಮಾರಿಗೆ ಹೃದಯವನ್ನು ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಗೆ ತರಲಾಯಿತು. ಇದೇ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಆಂಬುಲೆನ್ಸ್ ಮೂಲಕ ಹೃದಯವನ್ನು ಯಶಸ್ವಿಯಾಗಿ ತಂದರು. ಹೃದ್ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಯಶಸ್ವಿ ಕಸಿ ಮಾಡಲಾಯಿತು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಜೀರೊ ಟ್ರಾಫಿಕ್ ನಿರ್ಮಾಣ ಮಾಡಿ ಸಹಕರಿಸಿದರು.

ಚಿಕ್ಕಮಗಳೂರು: ಅಪಘಾತದಲ್ಲಿಯುವತಿ ಮೆದುಳು ನಿಷ್ಕ್ರೀಯ– 9 ಜನರಿಗೆ ಜೀವದಾನ!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.