ಬೆಳಗಾವಿ: ‘ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷನಾಗಿ ನೇಮಕಗೊಂಡಿರುವುದಕ್ಕೆ ಖುಷಿಯಾಗಿದೆ. ನಾನು ಈ ಹುದ್ದೆ ನಿರೀಕ್ಷಿಸಿರಲಿಲ್ಲ’ ಎಂದು ರಾಯಬಾಗದ ಶಾಸಕ ದುರ್ಯೋಧನ ಐಹೊಳೆ ಪ್ರತಿಕ್ರಿಯಿಸಿದರು.

‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶ್ರಾವಣ ಸೋಮವಾರದ ದಿನ ಒಳ್ಳೆಯ ಕೊಡುಗೆ ನೀಡಿದ್ದಾರೆ. ಮಂಡಳಿಯಲ್ಲಿ ಕೆಲಸ ಮಾಡಲು ಬಹಳಷ್ಟು ಅವಕಾಶವಿದೆ. ಅದನ್ನು ಬಳಸಿಕೊಳ್ಳುತ್ತೇನೆ’ ಎಂದರು.

‘ಜಿಲ್ಲಾ ನಾಯಕರ ಸಹಕಾರ ಮತ್ತು ರಾಜಕಾರಣದಲ್ಲಿ ನನ್ನ ಗಾಡ್‌ಫಾದರ್ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮೊದಲಾದವರ ಸಹಕಾರದಿಂದ ನನಗೆ ಅವಕಾಶ ಸಿಕ್ಕಿದೆ. ಮುಖ್ಯಮಂತ್ರಿಗೆ ಎಷ್ಟು ಧನ್ಯವಾದ ಅರ್ಪಿಸಿದರೂ ಸಾಲದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.