ಬೆಳಗಾವಿ: ‘ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ಮುಂದಿರಿಸಿ, ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು.

‘ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಾಗಿ ಎರಡೂವರೆ ತಿಂಗಳಾಗಿದೆ. ಆದರೆ, ಎರಡು ದಿನಗಳಲ್ಲಿ ಪ್ರಕರಣದ ತನಿಖೆ ತೀವ್ರಗತಿ ಪಡೆದಿದ್ದು, ಸಂಶಯಕ್ಕೆ ಆಸ್ಪದ ಮಾಡಿಕೊಟ್ಟಿದೆ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಕಾಂಗ್ರೆಸ್ ಸರ್ಕಾರ ಇಕ್ಕಟ್ಟಿನಲ್ಲಿ ಸಿಲುಕಿದೆ. ಅದನ್ನು ಮರೆ ಮಾಚಿ, ಜನರ ಗಮನ ಬೇರೆಡೆ ಸೆಳೆಯಲು ಈ ಪ್ರಕರಣ ಮುನ್ನೆಲೆಗೆ ತರಲಾಗುತ್ತಿದೆ’ ಎಂದು ಅವರು ತಿಳಿಸಿದರು.

‘ಯಡಿಯೂರಪ್ಪ ವಿರುದ್ಧ ದೂರು ಕೊಟ್ಟಿದ್ದ ಮಹಿಳೆ, ಇದೇ ರೀತಿ 50 ರಿಂದ 60 ಮಂದಿ ವಿರುದ್ಧ ದೂರು ಕೊಟ್ಟಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದರು. ಮಾನಸಿಕ ಅಸ್ವಸ್ಥೆಯಾಗಿದ್ದ ಮಹಿಳೆ ನೀಡಿದ ದೂರಿಗೆ ಮಹತ್ವವಿಲ್ಲ ಎಂದಿದ್ದರು. ಆ ಮಹಿಳೆ ಈಗ ಮೃತಪಟ್ಟಿದ್ದು, ಸಂತ್ರಸ್ತೆಯೂ ದೂರು ಕೊಟ್ಟಿಲ್ಲ. ಇದೆಲ್ಲವನ್ನೂ ಗಮನಿಸಿದರೆ, ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಸಿಲುಕಿಸುವ ಷಡ್ಯಂತ್ರ ನಡೆದಿದೆ ಎಂಬಂತೆ ಕಾಣುತ್ತದೆ’ ಎಂದರು.
.ಬಿಎಸ್‌ವೈ ವಿರುದ್ಧ ಕಾಂಗ್ರೆಸ್ ದ್ವೇಷದ ರಾಜಕಾರಣ: ಯೋಗೇಶ್ವರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.