ಬೆಳಗಾವಿ (ಸುವರ್ಣ ವಿಧಾನಸೌಧ): ‘ಸರ್ಕಾರಿ ವೈದ್ಯರು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಾಜರಿ ಇರುವುದನ್ನು ಖಚಿತಪಡಿಸಿಕೊಳ್ಳಲು ಜಿಯೋ ಟ್ರ್ಯಾಕ್ ತಂತ್ರಜ್ಞಾನ ಅಳವಡಿಸಲಾಗುತ್ತಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ಲಕ್ಷ್ಮಣ ಸವದಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ವೈದ್ಯರ ಕೊರತೆ ನೀಗಿಸಲು ವಿಶೇಷ ನೇಮಕಾತಿ ಆದೇಶ ಹೊರಡಿಸಲಾಗಿದೆ. ಈಗಾಗಲೇ ಸಾವಿರಕ್ಕೂ ಹೆಚ್ಚು ವೈದ್ಯರು ನೇಮಕ ಆಗಿದ್ದಾರೆ. ಬಾಕಿ ಇರುವ 150 ವೈದ್ಯರ ನೇಮಕಾತಿಗಾಗಿ ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ವೈದ್ಯರ ಕೊರತೆ ನಿಭಾಯಿಸಲು ಒಂದು ವರ್ಷ ಗ್ರಾಮೀಣ ಸೇವೆ ಕಡ್ಡಾಯಗೊಳಿಸಲಾಗಿದೆ. 2,300 ವೈದ್ಯರನ್ನು ವಿವಿಧ ಕಾಲೇಜುಗಳಿಂದ ಪಡೆಯಲಾಗಿದೆ’ ಎಂದು ಹೇಳಿದರು.

‘ಬೆಳಿಗ್ಗೆ 9.30ರಿಂದ 4.30ರವರೆಗೆ ವೈದ್ಯರು ಗ್ರಾಮೀಣ ಭಾಗದ ಚಿಕಿತ್ಸಾ ಕೇಂದ್ರದಲ್ಲಿ ಉಳಿದು ಚಿಕಿತ್ಸೆ ನೀಡಬೇಕು. ಕೆಲವರು ವೈಯಕ್ತಿಕವಾಗಿ ಕ್ಲಿನಿಕ್ನಡೆಸುತ್ತಿರಬಹುದು. ಆದರೆ, ಸರ್ಕಾರಿ ಕರ್ತವ್ಯದ ಅವಧಿಯಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಲು ಈಗಾಗಲೇ ಸಿಸಿಟಿವಿ ಸೇರಿದಂತೆ ಇತರ ಉಪಕ್ರಮಗಳನ್ನು ಜಾರಿಗೊಳಿಸಲಾಗಿದೆ. ಹಿಂದೆ ವೈದ್ಯರ ಕೊರತೆ ಇತ್ತು. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಕಷ್ಟವಿತ್ತು. ಈಗ ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಬರುತ್ತಿದ್ದಾರೆ. ಹೀಗಾಗಿ, ಸರ್ಕಾರಿ ಸೇವೆಯ ಅವಧಿಯಲ್ಲಿ ಖಾಸಗಿ ಆಸ್ಪತ್ರೆ ಅಥವಾ ಕ್ಲಿನಿಕ್‍ಗೆ ಹೋದರೆ ಕಠಿಣ ಕ್ರಮ ಜರುಗಿಸಲು ಮುಂದಿನ ದಿನಗಳಲ್ಲಿ ನೀತಿ ಜಾರಿಗೆ ತರಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.