ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಕೃಷ್ಣಾ ನದಿಯಿಂದ ರಾಜ್ಯಕ್ಕೆ 216220 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರದ ಕೊಯ್ನಾದಲ್ಲಿ 19.8 ಸೆಂ.ಮೀ., 16.8 ಸೆಂ.ಮೀ., ಕಾಳಮ್ಮವಾಡಿಯಲ್ಲಿ 15 ಸೆಂ.ಮೀ., ಮಹಾಬಳೇಶ್ವರದಲ್ಲಿ 26.7 ಸೆಂ.ಮೀ., ನವಜಾದಲ್ಲಿ 17.2 ಸೆಂ.ಮೀ., ರಾಧಾನಗರಿಯಲ್ಲಿ 23.4 ಸೆಂ.ಮೀ., ಸಾಂಗಲಿಯಲ್ಲಿ 2.6 ಸೆಂ.ಮೀ., ಕೊಲ್ಹಾಪುರದಲ್ಲಿ 10.4 ಸೆಂ.ಮೀ. ನಷ್ಟು, ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಚಿಕ್ಕೋಡಿಯಲ್ಲಿ 5.2 ಸೆಂ.ಮೀ., ಅಂಕಲಿಯಲ್ಲಿ 4.2 ಸೆಂ.ಮೀ., ಸದಲಗಾದಲ್ಲಿ 5.7 ಸೆಂ.ಮೀ. ಮಳೆಯು ಶುಕ್ರವಾರ ದಾಖಲಾಗಿದೆ.

ಕೊಲ್ಹಾಪುರ ಜಿಲ್ಲೆಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿರುವ ರಾಜಾಪುರೆ ಬ್ಯಾರೇಜಿನಿಂದ 177500 ಕ್ಯುಸೆಕ್, ದೂಧಗಂಗಾ ನದಿಗೆ ಕಲ್ಲೋಳ ಗ್ರಾಮದ ಬಳಿಯಲ್ಲಿ 38720 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಕಲ್ಲೋಳ-ಯಡೂರು ಬ್ಯಾರೇಜ್ ಬಳಿಯಲ್ಲಿ 216220 ಕ್ಯುಸೆಕ್ ನೀರು ಹರಿಯುತ್ತಿದೆ. ಹಿಪ್ಪರಗಿ ಬ್ಯಾರೇಜಿನ ಎಲ್ಲಾ 22 ಗೇಟ್ ಗಳಿಂದ 199210 ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.

ಮಹಾರಾಷ್ಟ್ರ ರಾಜ್ಯದಲ್ಲಿರುವ 105.25 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಕೊಯ್ನಾ ಡ್ಯಾಂನಲ್ಲಿ 81.20 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಕೊಯ್ನಾ ಅಣೆಕಟ್ಟೆಯಿಂದ ಶುಕ್ರವಾರ ಬೆಳಿಗ್ಗೆ 11 ಗಂಟೆಯಿಂದ ಎಲ್ಲಾ 6 ಗೇಟ್ ಗಳನ್ನು ತೆರೆದು 40 ಸಾವಿರ ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. 8.36 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ರಾಧಾನಗರಿ ಡ್ಯಾಂ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದ್ದರಿಂದ 10 ಸಾವಿರ ಕ್ಯುಸೆಕ್ ಗೂ ಹೆಚ್ಚು ನೀರನ್ನು ನದಿಗೆ ಬಿಡಲಾಗಿದೆ. 34.40 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ವಾರಣಾ ಜಲಾಶಯದಲ್ಲಿ 30.52 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, 16 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.