ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕೋಡಿ: ರಾಧಾನಗರಿ ಡ್ಯಾಂನಿಂದ ನೀರು ಬಿಡುಗಡೆ

Published 25 ಜುಲೈ 2024, 12:26 IST
Last Updated 25 ಜುಲೈ 2024, 12:26 IST
ಅಕ್ಷರ ಗಾತ್ರ

ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಳವಾಗಿದ್ದು, ದೂಧಗಂಗಾ ನದಿಗೆ ಅಡ್ಡಲಾಗಿರುವ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಧಾನಗರಿ ಜಲಾಶಯದ 6 ಸ್ವಯಂ ಚಾಲಿತ ಗೇಟ್‌ಗಳನ್ನು ತೆರೆದು 2928 ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ. 8.36 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಡ್ಯಾಂ ಬಹುತೇಕ ಭರ್ತಿಯಾಗಿದೆ. ಹೀಗಾಗಿ ಗುರುವಾರ ಬೆಳಿಗ್ಗೆಯಿಂದ ಅಣೆಕಟ್ಟುಯಿಂದ ನೀರನ್ನು ಹೊರಬಿಡಲಾಗುತ್ತಿದೆ.

ಇನ್ನು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ಪಂಚಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಗರಿಷ್ಠ ಮಟ್ಟ 43 ಅಡಿ ಮೀರಿ ಹರಿಯುತ್ತಿದ್ದು, ಬೃಹತ್ ಹಾಗೂ ಸಣ್ಣಪುಟ್ಟ ಸೇರಿದಂತೆ ಇದುವರೆಗೆ ಪಂಚಗಂಗಾ ನದಿಯಿಂದ 81 ಸೇತುವೆಗಳು ಜಲಾವೃತಗೊಂಡಿವೆ. ನದಿ ತನ್ನ ಪಾತ್ರ ಬದಲಿಸಿ ಸಹಸ್ರಾರು ಹೆಕ್ಟೇರ್ ಜಮೀನಿಗೆ ನುಗ್ಗಿ ಬೆಳೆಯನ್ನು ಆಹುತಿ ತೆಗೆದುಕೊಂಡಿದೆ. ಪಂಚಗಂಗಾ ನದಿ ನೀರಿನಲ್ಲಿ ಹೆಚ್ಚಳವಾಗಿದ್ದರಿಂದ ಚಿಕ್ಕೋಡಿ ಉಪ ವಿಭಾಗದ ಕೃಷ್ಣಾ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ.

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ಕೃಷ್ಣಾ ನದಿಯ ಉಪನದಿ ಪಂಚಗಂಗಾ ಪಾತ್ರ ಬಿಟ್ಟು ಹರಿದು ಹೊಲ ಗದ್ದೆಗಳಿಗೆ ನೀರು ನುಗ್ಗಿರುವುದು.
ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ಕೃಷ್ಣಾ ನದಿಯ ಉಪನದಿ ಪಂಚಗಂಗಾ ಪಾತ್ರ ಬಿಟ್ಟು ಹರಿದು ಹೊಲ ಗದ್ದೆಗಳಿಗೆ ನೀರು ನುಗ್ಗಿರುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT