ಖಾನಾಪುರ: ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯ್ತಿ ಮತ್ತು ಪಟ್ಟಣ ಪಂಚಾಯ್ತಿ ಸಹಯೋಗದಲ್ಲಿ ಪಟ್ಟಣದಲ್ಲಿ ಶುಕ್ರವಾರ ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ.

ಬೆಳಿಗ್ಗೆ 9 ಗಂಟೆಗೆ ಪಟ್ಟಣದ ಹಳೆ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಶಾಸಕ ವಿಠ್ಠಲ ಹಲಗೇಕರ ಅವರು ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸುವರು. ದೇವಿ ಚಿತ್ರದ ಮೆರವಣಿಗೆಗೆ ಚಾಲನೆ ನೀಡುವರು.

ಮೆರವಣಿಗೆಯಲ್ಲಿ ಜಾನಪದ ಕಲಾತಂಡಗಳು, ಕರಡಿ ಮಜಲು, ಡೊಳ್ಳು ಕುಣಿತ, ಶಾಲಾ-ಕಾಲೇಜುಗಳು ಮತ್ತು ಸಂಘ ಸಂಸ್ಥೆಗಳ ರೂಪಕಗಳು ಭಾಗವಹಿಸಲಿವೆ. ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಸರ್ವೋದಯ ವಿದ್ಯಾಲಯ ಪ್ರೌಢಶಾಲೆಯಲ್ಲಿ ಸಂಪನ್ನಗೊಳ್ಳಲಿದೆ.

ತಾಲ್ಲೂಕಿನ ಜನಪ್ರತಿನಿಧಿಗಳು, ಸಂಘ–ಸಂಸ್ಥೆಗಳ ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳ ಮುಖಂಡರು, ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಳ್ಳುವರು ಎಂದು ತಾಲ್ಲೂಕು ಆಡಳಿತದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.