ಖಾನಾಪುರ (ಬೆಳಗಾವಿ ಜಿಲ್ಲೆ): ‘ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಕನ್ನಡದೊಂದಿಗೆ ಮರಾಠಿ ಭಾಷೆಯಲ್ಲೂ ಮಾಹಿತಿ ಫಲಕ ಅಳವಡಿಸಬೇಕು’ ಎಂದು ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರು ಗ್ರೇಡ್–2 ತಹಶೀಲ್ದಾರ್ ಕೆ.ವೈ. ಬಿದರಿ ಅವರಿಗೆ ಸೂಚಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಶನಿವಾರ ವೈರಲ್ ಆಗಿದೆ.

ಸ್ವತಃ ಶಾಸಕಿಯೇ ತಮ್ಮ ಟ್ವಿಟರ್ ಖಾತೆಯಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ. ‘ಇದು ಸರಳ... ತಾಲ್ಲೂಕಿನ ಎಲ್ಲ ಗ್ರಾಮ ಒನ್ ಕೇಂದ್ರಗಳಲ್ಲೂ ಸರ್ಕಾರದ ಎಲ್ಲ ಯೋಜನೆಗಳ ಮಾಹಿತಿ ಫಲಕವು ಕನ್ನಡದೊಂದಿಗೆ ಮರಾಠಿ ಭಾಷೆಯಲ್ಲೂ ಇರಬೇಕು. ಇದರಲ್ಲಿ ರಾಜಕಾರಣವಿಲ್ಲ, ಜನರಿಗಾಗಿ ಈ ಕೆಲಸ’ ಎಂದು ಬರೆದುಕೊಂಡಿದ್ದಾರೆ.

ಹೊರವಲಯದ ಗಾಂಧಿನಗರದಲ್ಲಿ ಕೇಂದ್ರ ಉದ್ಘಾಟಿಸಿದ ಶಾಸಕಿ, ‘ತಾಲ್ಲೂಕಿನಲ್ಲಿರುವ ಮರಾಠಿ ಭಾಷಿಗರಿಗೆ ಕನ್ನಡ ಭಾಷೆ ಅರ್ಥ ಆಗುವುದಿಲ್ಲ. ಅವರು ಅಭ್ಯಾಸ ಮಾಡುತ್ತಿದ್ದಾರೆ. ಅವರು ಪೂರ್ಣ ಕಲಿಯುವವರೆಗೂ ಕನ್ನಡದ ಜೊತೆ ಮರಾಠಿಯಲ್ಲೂ ಮಾಹಿತಿ ಕೊಡಬೇಕು’ ಎಂದು ಸೂಚಿಸಿದ್ದಾರೆ.

‘ಈ ಹಿಂದೆ ತಹಶೀಲ್ದಾರ್ ಕಚೇರಿಯಲ್ಲಿ ಸಕಾಲ ಯೋಜನೆಯ ಫಲಕಗಳನ್ನೂ ಮರಾಠಿ ಭಾಷೆಯಲ್ಲೂ ಫಲಕ ಅಳವಡಿಸುವಂತೆ ಸೂಚಿಸಿದ್ದೆ. ಅವರು ಹಾಕಿದ್ದರು. ನಾವು ಜನ ಸೇವೆ ಮಾಡುತ್ತಿದ್ದೇವೆ; ಅವರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಬೇಕಾಗುತ್ತದೆ’ ಎಂದಿದ್ದಾರೆ.

ಇದಕ್ಕೆ ತಹಶೀಲ್ದಾರರು ಸಮ್ಮತಿ ಸೂಚಿಸಿರುವುದು ವಿಡಿಯೊದಲ್ಲಿದೆ.

ವಿಡಿಯೊಗೆ ಪ್ರತಿಕ್ರಿಯಿಸಿರುವ ನೆಟ್ಟಿಗರು, ಶಾಸಕರ ನಡೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ‘ಮರಾಠಿ ಪ್ರೇಮ ಬಿಡಿ; ಕನ್ನಡ ಭಾಷಾಭಿಮಾನ ಬೆಳೆಸಿಕೊಳ್ಳಿ’ ಎಂದಿದ್ದಾರೆ. ‘ಹೀಗಾದರೆ, ಮರಾಠಿ ಭಾಷಿಗರು ಕನ್ನಡ ಕಲಿಯುವುದು ಯಾವಾಗ? ಮಹಾರಾಷ್ಟ್ರದಲ್ಲಿರುವ ಕನ್ನಡಿಗರು ಮರಾಠಿ ಕಲಿತಿಲ್ಲವೇ’ ಎಂಬಿತ್ಯಾದಿಯಾಗಿ ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.