ಬೆಳಗಾವಿ: ಇಲ್ಲಿನ ಕೆಎಲ್‌ಇ ವಿಶ್ವವಿದ್ಯಾಲಯದ ಜೆ.ಎನ್. ಮೆಡಿಕಲ್ ಕಾಲೇಜು ಉದ್ಯಾನದಲ್ಲಿ ಶುಕ್ರವಾರ 300 ಗಾಯಕರು ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಕೆಎಲ್‌ಇಎಸ್ ಸಂಗೀತ ಮಹಾವಿದ್ಯಾಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶ್ವತಧಾರಿಗಳಾಗಿ ಬಂದ ಎಲ್ಲ ಗಾಯಕರೂ ಸುಶ್ರಾವ್ಯವಾಗಿ ಕನ್ನಡ ಗೀತೆಗಳನ್ನು ಹಾಡಿದರು. ಕುವೆಂಪು, ಹುಯಿಲಗೋಳ ನಾರಾಯಣರಾಯ, ಡಿ.ಎಸ್.ಕರ್ಕಿ, ಚನ್ನವೀರ ಕಣವಿ, ಹಂಸಲೇಖಾ ಅವರು ರಚಿಸಿದ ಹಾಡುಗಳನ್ನು ಹಾಡಿ ರಂಜಿಸಿದರು.

ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಗೌರವ ಅತಿಥಿಗಳಾಗಿ ಕುಲಪತಿ ಡಾ.ಎನ್.ಎಸ್. ಮಹಾಂತಶೆಟ್ಟಿ, ಕುಲಸಚಿವ ಡಾ.ವಿ.ಎ. ಕೋಠಿವಾಲೆ, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಎಂ.ವಿ. ಜಾಲಿ, ಯುಎಸ್‌ಎಂ- ಕೆಎಲ್‌ಇ ನಿರ್ದೇಶಕ ಡಾ.ಎಚ್.ಬಿ. ರಾಜಶೇಖರ, ಹೊಸ ಯೋಜನೆಗಳ ನಿರ್ದೇಶಕ ಡಾ.ವಿ.ಡಿ. ಪಾಟೀಲ, ಕನ್ನಡ ಬಳಗದ ಕಾರ್ಯಾಧ್ಯಕ್ಷ ಡಾ.ಅವಿನಾಶ ಕವಿ ಸೇರಿದಂತೆ ಎಲ್ಲ ಸಂಗ ಸಂಸ್ಥೆಗಳ ಸಿಬ್ಬಂದಿ ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.