ಬೆಳಗಾವಿ: ಅಥಣಿ ಶಾಸಕ ಲಕ್ಷ್ಮಣ ಸವದಿ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮತ್ತು ಚನ್ನಮ್ಮನ ಕಿತ್ತೂರು ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಅವರು ಸೋಮವಾರ ಡಿಸಿಸಿ ಬ್ಯಾಂಕ್‌ನ ಸಾಮಾನ್ಯ ಸಭೆಯಲ್ಲಿ ಪಾಲ್ಗೊಳ್ಳಲು ಒಂದೇ ಕಾರಿನಲ್ಲಿ ಬಂದರು. ಸಭೆಗೂ ಮುನ್ನ ಇಲ್ಲಿನ ಸದಾಶಿವನಗರದ ಸವದಿ ಅವರ ಮನೆಯಲ್ಲಿ ಗೋಪ್ಯ ಸಭೆ ನಡೆಸಿ, ಊಟ ಮಾಡಿದರು.

ಇದರ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಲಕ್ಷ್ಮಣ ಸವದಿ, ‘ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪಕ್ಷಾತೀತವಾಗಿದೆ. ಒಂದೇ ವಾಹನದಲ್ಲಿ ಬಂದಿದ್ದು ವಿಶೇಷವೇನೂ ಅಲ್ಲ. ಎಲ್ಲರೂ ಸೇರಿಯೇ ಸಭೆ ಮಾಡುತ್ತೇವೆ’ ಎಂದರು.

ಬ್ಯಾಂಕ್‌ನ ಅಧ್ಯಕ್ಷ ರಮೇಶ ಕತ್ತಿ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ತಯಾರಿ ನಡೆದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಇದೆಲ್ಲ ಊಹಾಪೋಹ. ಬ್ಯಾಂಕ್‌ನಲ್ಲಿ ಗುಂಪುಗಾರಿಕೆ ಇಲ್ಲ’ ಎಂದರು.

‘ಬಿಜೆಪಿಗೆ ತಮ್ಮನ್ನು ವಾಪಸ್ ಕರೆದೊಯ್ಯಲು ತಂಡ ಸಿದ್ಧವಾಗಿದೆಯೇ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ತಂಡದ ಬಗ್ಗೆ ಗೊತ್ತಿಲ್ಲ. ಇವೆಲ್ಲ ಸಹಜ ಬೆಳವಣಿಗೆ. ನಾನು, ನನ್ನ ಮಗ ಯಾವ ಪಕ್ಷದಿಂದಲೂ ಲೋಕಸಭೆಗೆ ಸ್ಪರ್ಧಿಸುವುದಿಲ್ಲ’ ಎಂದರು.

‘ಸವದಿ ಮನಸ್ಸಿನಲ್ಲಿ ಏನಿದೆ ಎಂಬುದನ್ನು ತಿಳಿದು ಮಾತನಾಡುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ನನ್ನ ಮನಸ್ಸಿನಲ್ಲಿ ಏನಿದೆ ಎಂಬುದು ನನಗೆ ಮತ್ತು ದೇವರಿಗೆ ಮಾತ್ರ ಗೊತ್ತು’ ಎಂದರು.

‘ನನ್ನ ಕ್ಷೇತ್ರದ ಏತ ನೀರಾವರಿ ಯೋಜನೆಗಳ ಕುರಿತು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಖುದ್ದು ಭೇಟಿ ಆಗಿರುವೆ. ಅವರು ನಮ್ಮ ಮನೆ ಯಜಮಾನರು. ಅವರ ಭೇಟಿಗೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.