ಬೆಳಗಾವಿ: ‘ಪೃಥ್ವಿ ಸಿಂಗ್ ಮೇಲೆ ನಡೆದಿರುವ ಹಲ್ಲೆ ಘಟನೆಗೂ ನಮಗೂ ಯಾವುದೇ ಸಂಬಂಧವಿಲ್ಲ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದ್ದಾರೆ.

‘ಒಂದು ದಾಖಲೆ ಸಲುವಾಗಿ ಪೃಥ್ವಿ ಸಿಂಗ್ ಮನೆಗೆ ನಮ್ಮ ಕಡೆಯವರು ಹೋಗಿ ಮಾತುಕತೆ ನಡೆಸಿದ್ದಾರೆ. ಈ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಮ್ಮ ಕಡೆಯವರು ಆತನೊಂದಿಗೆ ಮಾತನಾಡುವಾಗ, ಅವರು ಕೇಸರಿ ಬಣ್ಣದ ಟೀ–ಶರ್ಟ್ ಹಾಕಿರುವ ದೃಶ್ಯ ಸೆರೆಯಾಗಿದೆ’ ಎಂದಿದ್ದಾರೆ.

‘ಆದರೆ, ರಕ್ತ ಅಂಟಿಕೊಂಡಿದ್ದ ಬಿಳಿ ಬಣ್ಣದ ಅಂಗಿಯನ್ನು ಧರಿಸಿ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಆತ ದುರುದ್ದೇಶಪೂರ್ವವಾಗಿ ಆರೋಪ ಮಾಡುತ್ತಿರುವುದು ಸ್ಪಷ್ಟವಾಗಿದೆ. ಪೊಲೀಸರು ತನಿಖೆ ನಡೆಸಿ ಈ ಕೃತ್ಯದ ಹಿಂದೆ ಯಾರಿದ್ದಾರೆ ಎಂಬುದು ಪತ್ತೆ ಹಚ್ಚಬೇಕು’ ಎಂದಿದ್ದಾರೆ.
.ಚನ್ನರಾಜ ಹಟ್ಟಿಹೊಳಿ ಸೇರಿ ಎಲ್ಲ ಆರೋಪಿಗಳನ್ನು ಬಂಧಿಸಿ: ವಿಜಯೇಂದ್ರ.ರಮೇಶ ಜಾರಕಿಹೊಳಿ ಆಪ್ತನ ಮೇಲೆ ಚನ್ನರಾಜ ಹಟ್ಡಿಹೊಳಿ ಆಪ್ತರಿಂದ ಹಲ್ಲೆ: ಆರೋಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.