ಬೆಳಗಾವಿ: ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಅವರ ಪತ್ನಿ, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರಿಗೆ ಮಂಗಳವಾರ ಕೋವಿಡ್–19 ದೃಢಪಟ್ಟಿದೆ.

ಈ ವಿಷಯವನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ತಿಳಿಸಿದ್ದಾರೆ. ‘ತಪಾಸಣೆಗೆ ಒಳಪಟ್ಟಾಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಆದರೂ ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರೈಂಟೈನ್ ಆಗಿದ್ದೇನೆ. ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ವೈದ್ಯರ ಸಲಹೆ ಪಡೆಯಬೇಕು’ ಎಂದು ಕೋರಿದ್ದಾರೆ.

ಉಪ ಚುನಾವಣೆಯ ಮತ ಎಣಿಕೆ ಮೇ 2ರಂದು ನಿಗದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.