ಬೆಳಗಾವಿ: ‘ಜಿಲ್ಲೆಯ ವಿವಿಧ ಪಟ್ಟಣ ಪಂಚಾಯ್ತಿಗಳ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಡಿ.13ರ ಸಂಜೆಯೊಳಗೆ ಬಿ-ಫಾರ್ಮ್ ವಿತರಿಸುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದ ಅವರು, ‘ವಿಧಾನಪರಿಷತ್ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ನಮ್ಮ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಪ್ರತಿಸ್ಪರ್ಧಿಗಳಿಗಿಂತ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ. 3ಸಾವಿರಕ್ಕಿಂತಲೂ ಹೆಚ್ಚಿನ ಮತಗಳನ್ನು ಪಡೆಯುತ್ತೇವೆ. ಬೇರೆ ಪಕ್ಷದವರ ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ’ ಎಂದರು.

‘ಮುಂದಿನ ಚುನಾವಣೆಯನ್ನು ಗೋಕಾಕದ ಹಿಲ್ ಗಾರ್ಡನ್ (ಸತೀಶ ನಿವಾಸ)ನಿಂದಲೇ ನಡೆಸೋಣ’ ಎಂಬ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿಕೆಗೆ, ‘ಅವರು ಏನು ಹೇಳಿದ್ದಾರೆ ಎನ್ನುವುದು ಯಾರಿಗೂ ಅರ್ಥವಾಗಿಲ್ಲ. ನಾವು ಯಾವುದೇ ಚುನಾವಣೆಯನ್ನು ಕೇಂದ್ರೀಕೃತವಾಗಿ ನಡೆಸಿಲ್ಲ. ಅವರು ಮಾತ್ರ ಅಧಿಕಾರವನ್ನು ಕೈಯಲ್ಲೇ ಹಿಡಿದುಕೊಂಡಿರುತ್ತಾರೆ’ ಎಂದು ತಿರುಗೇಟು ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.