ಬೆಳಗಾವಿ: ಮಹದಾಯಿ ನ್ಯಾಯಾಧೀಕರಣದ ತೀರ್ಪಿನನ್ವಯ ಕೂಡಲೇ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿಜೆಡಿಎಸ್ ನಾಯಕ ಎನ್.ಎಚ್.ಕೋನರಡ್ಡಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿನ ರಾಣಿ ಚನ್ನಮ್ಮ ವೃತ್ತದಿಂದರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ,ಜೆಡಿಎಸ್ ಮುಖಂಡರು, ಕರ್ನಾಟಕ ಸಂಗ್ರಾಮ ಸೇನೆ, ಕರ್ನಾಟಕ ರಕ್ಷಣಾ ವೇದಿಕೆಸ್ವಾಭಿಮಾನ ಬಣಸೇರಿ ವಿವಿಧ ಸಂಘಟನೆಗಳು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.

‘ಮಹದಾಯಿ ನ್ಯಾಯಾದೀಕರಣವು ಈಗಾಗಲೇ ತೀರ್ಪು ನೀಡಿದೆ. ಇದರ ಅನ್ವಯ ಕೇಂದ್ರ ಸರ್ಕಾರ ಕೂಡಲೇ ಅಧಿಸೂಚನೆ ಹೊರಡಿಸಬೇಕು. ನರೇಂದ್ರ ಮೋದಿ ತುಮಕೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಈ ಬಗ್ಗೆ ಘೋಷಿಸಬೇಕು’ ಎಂದು ಎನ್.ಎಚ್. ಕೋನರಡ್ಡಿ ಒತ್ತಾಯಿಸಿದರು.

‘ಮಹದಾಯಿ, ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ನಿರಂತರ ಹೋರಾಟ ನಡೆಯುತ್ತಿವೆ. ನ್ಯಾಯಾಲಯವು ತೀರ್ಪು ನೀಡಿ 1 ವರ್ಷ ಕಳೆದಿದೆ. ಆದರೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸುತ್ತಿಲ್ಲ. ಕೂಡಲೇ ಅಧಿಸೂಚನೆ ಹೊರಡಿಸಬೇಕು. ಹೋರಾಟದಲ್ಲಿ ಭಾಗಿಯಾಗಿದ್ದ ರೈತರ ಮೇಲೆ ದಾಖಲಿಸಿದ್ದ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು’ ಎಂದರು.

‘ಮಹದಾಯಿ ನದಿ ವ್ಯಾಪ್ತಿಯ ಶಾಸಕರು, ಸಂಸದರು ಹಾಗೂ ಸಚಿವರುಗಳ ಸಭೆಯನ್ನುಇದೇ 5 ರಂದು ಹುಬ್ಬಳ್ಳಿ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದೆ. ಅಲ್ಲಿ ವಿಸ್ತೃತವಾಗಿ ಚರ್ಚಿಸಲಾಗುವುದು’ ಎಂದರು.

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ, ರೈತ ಮುಖಂಡರಾದ ಚೂನಪ್ಪಾ ಪೂಜಾರಿ,ಜಯಶ್ರೀ ಗುರನ್ನವರ, ಶ್ವೇತಾ ದುಮನಾಳ, ಯಶೋಧಾ ಬಿರಡಿ, ನಿರ್ಮಲಾ ಹಡಗಲಿ, ಈಶ್ವರಗೌಡಾ ಪಾಟೀಲ, ಶಾಂತಾ ಸಿಂದೆ, ಮಹಾದೇವಿ ಹಿರೇಮಠ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.