ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿರುವ ಡಿ.4ರಂದು ‘ಮಹಾಮೇಳಾವ್’ ಆಯೋಜಿಸಲು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀರ್ಮಾನಿಸಿದೆ.

ನಗರದಲ್ಲಿ ಬುಧವಾರ ನಡೆದ ಸಭೆ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಎಂಇಎಸ್ ಪ್ರಧಾನ ಕಾರ್ಯದರ್ಶಿ ಮಾಲೋಜಿ ಅಷ್ಟೇಕರ್, ‘ಈ ಬಾರಿ ಮಹಾಮೇಳಾವ್ ಯಶಸ್ವಿಗೊಳಿಸಲು ಮತ್ತು ಇದಕ್ಕಿರುವ ತೊಡಕುಗಳನ್ನು ನಿವಾರಿಸಲು ನಿರ್ಧರಿಸಿದ್ದೇವೆ. ಇದಕ್ಕಾಗಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನಲ್ಲಿರುವ ಮುಖಂಡರನ್ನು ಒಳಗೊಂಡ ಸಮಿತಿ ರಚಿಸಲಾಗುವುದು’ ಎಂದು ಹೇಳಿದರು.

‘ಮಹಾಮೇಳಾವ್ ನಡೆಸುವ ವಿಷಯವನ್ನು ಮಹಾರಾಷ್ಟ್ರ ಸರ್ಕಾರ ಮತ್ತು ಸಚಿವರ ಗಮನಕ್ಕೆ ತರಲು ನಿರ್ಧರಿಸಿದ್ದೇವೆ. ಸ್ಥಳವನ್ನು ಶೀಘ್ರ ಅಂತಿಮಗೊಳಿಸುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.