ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೈದುಂಬಿ ಹರಿಯುತ್ತಿರುವ ಮಲಪ್ರಭೆ

Published 24 ಜುಲೈ 2024, 16:25 IST
Last Updated 24 ಜುಲೈ 2024, 16:25 IST
ಅಕ್ಷರ ಗಾತ್ರ

ಎಂ.ಕೆ.ಹುಬ್ಬಳ್ಳಿ: ನಿರಂತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲಪ್ರಭೆ ಮೈದುಂಬಿ ಹರಿಯುತ್ತಿದ್ದಾಳೆ.

ಖಾನಾಪುರದ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಮಲಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಎಂ.ಕೆ.ಹುಬ್ಬಳ್ಳಿ ಪಟ್ಟಣದ ಬಳಿಯ ರಾಷ್ಟ್ರೀಯ ಹೆದ್ದಾರಿ-4ರ ಪಕ್ಕದಲ್ಲಿ ಮಲಪ್ರಭಾ ನದಿ ಮಧ್ಯದಲ್ಲಿರುವ ಶರಣೆ ಗಂಗಾಂಬಿಕಾ ಐಕ್ಯಮಂಟಪದ ಸುತ್ತ ಮಲಪ್ರಭೆಯ ಮೈದುಂಬಿ ಹರಿಯುತ್ತಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ.

ಮಳೆಯ ಆರ್ಭಟ ಮುಂದುವರಿದಿದ್ದು, ದಿನದಿಂದ ದಿನಕ್ಕೆ ನದಿಯ ನೀರಿನ ಮಟ್ಟ ಹೆಚ್ಚುತ್ತಿದೆ. ಸದ್ಯ ಎಂ.ಕೆ‌.ಹುಬ್ಬಳ್ಳಿ ಬಳಿಯ ನದಿಯಲ್ಲಿ ಅಡ್ಡಲಾಗಿರುವ ಬ್ರಿಜ್ ಕಂ ಬ್ಯಾರೇಜ್ ಮುಳುಗಡೆಯಾಗಿದ್ದು, ಪಕ್ಕದಲ್ಲಿರುವ ಹಳೇ ಸೇತುವೆ ಮೇಲ್ಭಾಗಕ್ಕೂ ಮಲಪ್ರಭಾ ನದಿ ನೀರಿನ ಹರಿವು ತಾಗುತ್ತಿದೆ. ಹಳೇ ಸೇತುವೆ ಮುಳುಗಡೆಯಾದರೆ, ನದಿ ಪ್ರವಾಹ ಪಕ್ಕದ ಕೃಷಿ ಜಮೀನುಗಳಿಗೆ ಆವರಿಸಿಕೊಳ್ಳಲಿದೆ. ಎಂ.ಕೆ.ಹುಬ್ಬಳ್ಳಿ ಪಟ್ಟಣದ ಹಾಗೂ ಸುತ್ತಲಿನ ಗ್ರಾಮಗಳಲ್ಲೂ ಮಳೆಯ ಆರ್ಭಟ ಮುಂದುವರಿದಿದೆ.

24mkh1 ನಿರಂತರ ಮಳೆಗೆ ಎಂ.ಕೆ‌.ಹುಬ್ಬಳ್ಳಿ ಬಳಿಯ ಮಲಪ್ರಭಾ ನದಿ ಮೈದುಂಬಿ ಹರಿಯುತ್ತಿದೆ. ಜಗಜ್ಯೋತಿ ಬಸವೇಶ್ವರ ಧರ್ಮಪತ್ನಿ ಶರಣೆ ಗಂಗಾಂಬಿಕಾ ಐಕ್ಯಮಂಟಪ ಜನರನ್ನು ಆಕರ್ಷಿಸುತ್ತಿದೆ.
24mkh1 ನಿರಂತರ ಮಳೆಗೆ ಎಂ.ಕೆ‌.ಹುಬ್ಬಳ್ಳಿ ಬಳಿಯ ಮಲಪ್ರಭಾ ನದಿ ಮೈದುಂಬಿ ಹರಿಯುತ್ತಿದೆ. ಜಗಜ್ಯೋತಿ ಬಸವೇಶ್ವರ ಧರ್ಮಪತ್ನಿ ಶರಣೆ ಗಂಗಾಂಬಿಕಾ ಐಕ್ಯಮಂಟಪ ಜನರನ್ನು ಆಕರ್ಷಿಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT