ಬೆಳಗಾವಿ: ‘ಜಿಲ್ಲೆಯ ಎಲ್ಲ ತಹಶೀಲ್ದಾರರು ತಮ್ಮ ವ್ಯಾಪ್ತಿಯ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ, ಊಟೋಪಹಾರ, ಔಷಧ ಸಾಮಗ್ರಿಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಪ್ರವಾಹದಿಂದ ಜನರು ಮತ್ತು ಜಾನುವಾರುಗಳ ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಾಲ್ ಸೂಚಿಸಿದರು.

ಅತಿವೃಷ್ಟಿಯಿಂದ ಉಂಟಾದ ಹಾನಿ, ಪ್ರವಾಹ ನಿರ್ವಹಣೆ ಸಂಬಂಧ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

‘ಆಗಸ್ಟ್ನಲ್ಲಿ ಮಳೆ ಪ್ರಮಾಣ ಹೆಚ್ಚುವ ಸಾಧ್ಯತೆ ಇದ್ದು, ಎಲ್ಲ ಕಾಳಜಿ ಕೇಂದ್ರಗಳಲ್ಲಿ ಆಹಾರ, ಔಷಧ ಮತ್ತು ನೀರಿನ ವ್ಯವಸ್ಥೆ ಮಾಡಿಕೊಳ್ಳಬೇಕು. ಜಾನುವಾರು ಶಿಬಿರಗಳಲ್ಲಿ ಬೇಡಿಕೆಯಂತೆ ಮೇವಿನ ದಾಸ್ತಾನು ಇರಿಸಿಕೊಳ್ಳಬೇಕು. 2019ರ ಪ್ರವಾಹ ಪರಿಸ್ಥಿತಿ ಗಮನದಲ್ಲಿ ಇಟ್ಟುಕೊಂಡು, ಈ ಬಾರಿ ಯಾವ ಸಮಸ್ಯೆ ತಲೆದೋರದಂತೆ ಸಿದ್ಧತೆ ಮಾಡಿಕೊಳ್ಳಬೇಕು’ ಎಂದರು.

‘ಜಲಾಶಯಗಳಿಂದ ನೀರು ಬಿಡುವಾಗ ಬ್ಯಾರೇಜ್ಗಳ ನಿರ್ವಹಣೆಗಾಗಿ ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕೆಲಸ ಮಾಡಬೇಕು. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವ ಕಾರಣ, ಜನರ ಪ್ರಾಣ ರಕ್ಷಣೆಗೆ ಒತ್ತು ನೀಡಬೇಕು’ ಎಂದು ಸೂಚಿಸಿದರು.

‘ವಿಪತ್ತು ನಿರ್ವಹಣೆಗಾಗಿ ತಹಶೀಲ್ದಾರರ ಖಾತೆಯಲ್ಲಿ ಸಾಕಷ್ಟು ಹಣವಿದೆ. ಒಂದುವೇಳೆ ಹಣದ ಕೊರತೆಯಾದರೆ, ತಕ್ಷಣವೇ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು’ ಎಂದೂ ತಿಳಿಸಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ‘ಮಹಾರಾಷ್ಟ್ರ ಹಾಗೂ ಕರ್ನಾಟಕ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ಸಮನ್ವಯದೊಂದಿಗೆ ಜಿಲ್ಲೆಯ ಜಲಾಶಯಗಳ ನೀರಿನ ಸಂಗ್ರಹ ಮಟ್ಟವನ್ನು ಸಮರ್ಪಕವಾಗಿ ನಿರ್ವಹಿಸಲಾಗುತ್ತಿದೆ. ಕೃಷ್ಣಾ, ಘಟಪ್ರಭಾ, ಮಲಪ್ರಭಾ ಸೇರಿದಂತೆ ಎಲ್ಲ ನದಿಪಾತ್ರದ ಗ್ರಾಮಗಳ ಜನರ ರಕ್ಷಣೆ ಮತ್ತು ಸ್ಥಳಾಂತರಕ್ಕೆ ಕ್ರಮ ವಹಿಸಲಾಗಿದೆ’ ಎಂದರು.

‘ಜಿಲ್ಲೆಯಲ್ಲಿ 427 ಕಾಳಜಿ ಕೇಂದ್ರ ತೆರೆಯಲು ತಯಾರಿ ಮಾಡಿಕೊಂಡಿದ್ದೇವೆ. ಈ ಪೈಕಿ ಈವರೆಗೆ ಅಗತ್ಯತೆ ಆಧರಿಸಿ, 46 ಕೇಂದ್ರ ಆರಂಭಿಸಿದ್ದೇವೆ. ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿದ್ದ 3,684 ಕುಟುಂಬಗಳ 10,304 ಜನರಿಗೆ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಕಲ್ಪಿಸಿದ್ದೇವೆ’ ಎಂದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ‘ಗುಡ್ಡಗಾಡು ಪ್ರದೇಶ ಮತ್ತು ಅರಣ್ಯದಲ್ಲಿ ಕೆಲವು ಪ್ರದೇಶ ಹೊರತುಪಡಿಸಿದರೆ, ಜಿಲ್ಲೆಯ ಯಾವುದೇ ಸ್ಥಳಕ್ಕೂ ಆಂಬುಲೆನ್ಸ್, ವೈದ್ಯಕೀಯ ಸೇವೆ ಒದಗಿಸಲು ಆರೋಗ್ಯ ಇಲಾಖೆ ಸನ್ನದ್ಧವಾಗಿದೆ’ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ‘ಮುಳುಗಡೆಯಾದ ಕೆಳಹಂತದ ಸೇತುವೆಗಳ ಮೇಲೆ ಸಂಚಾರ ತಡೆಯಲು ಬ್ಯಾರಿಕೇಡ್ ಅಳವಡಿಸಿ, ಸಿಬ್ಬಂದಿ ನಿಯೋಜಿಸಲಾಗಿದೆ. ಕೆಲವು ಸೇತುವೆ ಈಗ ಸಂಚಾರಕ್ಕೆ ಮುಕ್ತವಾಗಿವೆ’ ಎಂದರು.

ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ನಗರ ಪೊಲೀಸ್ ಉಪ ಆಯುಕ್ತ ರೋಹನ್ ಜಗದೀಶ್, ಪ್ರೊಬೇಷನರಿ ಐಎಎಸ್ ಅಧಿಕಾರಿ ದಿನೇಶಕುಮಾರ್ ಮೀನಾ ಇತರರಿದ್ದರು. ಎಲ್ಲ ತಹಶೀಲ್ದಾರರು ವಿಡಿಯೊ ಸಂವಾದದ ಮೂಲಕ ಹಾಜರಾದರು.

‘ಜಾಗರೂಕತೆಯಿಂದ ಕೆಲಸ ಮಾಡಿ’

‘ಕೃಷಿ ತೋಟಗಾರಿಕೆ ಬೆಳೆಗಳ ಹಾನಿ ಕುರಿತು ಸರಿಯಾಗಿ ಪರಿಶೀಲಿಸಬೇಕು. ಅಂತೆಯೇ ರಸ್ತೆಗಳ ಹಾನಿ ಕುರಿತು ಸಮೀಕ್ಷೆ ನಡೆಸಬೇಕು. ಯಾವುದೇ ಅಧಿಕಾರಿ ರಜೆಗೆ ತೆರಳದೆ ಕೇಂದ್ರ ಸ್ಥಾನದಲ್ಲಿ ಇದ್ದುಕೊಂಡು ಜಾಗರೂಕತೆಯಿಂದ ಕೆಲಸ ಮಾಡಬೇಕು’ ಎಂದು ವಿಪುಲ್ ಬನ್ಸಾಲ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.