ಬೆಳಗಾವಿ: ನಗರದಲ್ಲಿ ಬುಧವಾರ ನಡೆದ ಮರಾಠ ಕೋ -ಆಪರೇಟಿವ್ ಬ್ಯಾಂಕ್ನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಕಾರ್ಯಕರ್ತರು ನಾಡವಿರೋಧಿ ಘೋಷಣೆ ಕೂಗಿದ್ದಾರೆ.

ಮಹಾರಾಷ್ಟ್ರದ ರಾಜ್ಯಸಭಾ ಸದಸ್ಯ ಹಾಗೂ ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಘೋಷಣೆ ಮೊಳಗಿಸುವ ಮೂಲಕ ಗಡಿವಿವಾದವನ್ನು ಕೆದಕುವ ಪ್ರಯತ್ನವನ್ನು ಕಾರ್ಯಕರ್ತರು ಮಾಡಿದ್ದಾರೆ.

ಪವಾರ್ ಭಾಷಣ ಆರಂಭಿಸುತ್ತಿದ್ದಂತೆಯೇ ಕಾರ್ಯಕರ್ತರು, ‘ಬೆಳಗಾಂವ್, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಝಾಲಾಚ್ ಪಾಹಿಜೆ’ (ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಆಗಲೇಬೇಕು) ಎಂದು ಮರಾಠಿಯಲ್ಲಿ ಘೋಷಣೆ ಕೂಗಿದ್ದಾರೆ. ಇದರಿಂದ ಆಯೋಜಕರು ತಬ್ಬಿಬ್ಬಾಗಿದ್ದಾರೆ.

ಘೋಷಣೆ ಕೂಗುವ ವೇಳೆ ಮಾತು ನಿಲ್ಲಿಸಿದ ಪವಾರ್, ‘ಭಾಷಣ ಆರಂಭಿಸಬಹುದಾ, ನಿಮ್ಮ ಅನುಮತಿ ಪಡೆದು ಭಾಷಣ ಶುರುಮಾಡುತ್ತೇನೆ’ ಎಂದು ಮಾತು ಮುಂದುವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.