ಬೆಳಗಾವಿ: ಇಲ್ಲಿನ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ, ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ವಾರ್ಡ್ಗಳಿಗೆ ಸೋಮವಾರ ಸೈಕಲ್ ಮೇಲೆ ತೆರಳಿ ಜನರ ಕುಂದುಕೊರತೆ ಆಲಿಸಿದರು.

ರಾಣಿ ಚನ್ನಮ್ಮ ನಗರ, ಗುರುಪ್ರಸಾದ ಕಾಲೊನಿ ಮತ್ತಿತರ ಬಡಾವಣೆಗೆ ಪಾಲಿಕೆ ಸದಸ್ಯರು ಮತ್ತು ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಶಾಸಕರು, ಜನರಿಗೆ ವಿವಿಧ ಸೌಕರ್ಯಗಳನ್ನು ಒದಗಿಸಿರುವ ಬಗ್ಗೆ ಪರಿಶೀಲಿಸಿದರು.

‘ಕೊಳವೆಬಾವಿ ಕೊರೆಯಿಸಿ ನಮಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸಬೇಕು. ಎಲ್ಲೆಂದರಲ್ಲಿ ಕಸ ಸುಡುತ್ತಿರುವುದಕ್ಕೆ ಕಡಿವಾಣ ಹಾಕಬೇಕು’ ಎಂದು ನಿವಾಸಿಗಳು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಭಯ, ‘ನಿಮಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸಲು ಕ್ರಮ ವಹಿಸುತ್ತೇವೆ. ಭೂವಿಜ್ಞಾನಿಗಳ ವರದಿ ಆಧರಿಸಿ ನೀರು ಲಭ್ಯವಿರುವ ಕಡೆ ಕೊಳವೆಬಾವಿ ಕೊರೆಯಿಸಲು ಸಹಕಾರ ನೀಡಿ’ ಎಂದು ಕೋರಿದರು.

‘ಸ್ಥಳ ಲಭ್ಯವಿರುವ ಓವರ್ಹೆಡ್ ಟ್ಯಾಂಕ್ಗಳನ್ನು ನಿರ್ಮಿಸಿ, ಜನರಿಗೆ ಅನುಕೂಲ ಕಲ್ಪಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.