ಮೂಡಲಗಿ: ‘ಮೂಡಲಗಿ ಪಟ್ಟಣದಲ್ಲಿ ಪುರಸಭೆಯಿಂದ ₹6.92 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕವಾದ ವಾಣಿಜ್ಯ ಮಳಿಗೆಯನ್ನು ನಿರ್ಮಿಸಲಾಗುವುದು’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.

ಇಲ್ಲಿನ ಪುರಸಭೆಗೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಐಡಿಎಸ್ಎಂಟಿ ಯೋಜನೆ ಅಡಿಯಲ್ಲಿ ಮಳಿಗೆಯನ್ನು ನಿರ್ಮಿಸಲಿದ್ದು, ಇದು ಬಹು ಮಹಡಿ ಕಟ್ಟಡವನ್ನು ಹೊಂದಿರಲಿದೆ. ನೆಲ ಮಾಳಿಗೆಯಲ್ಲಿ (ಬೆಸ್ ಮೆಂಟ್) ವಾಹನಗಳ ಪಾರ್ಕಿಂಗ್, ನೆಲ ಮಹಡಿಯಲ್ಲಿ 51 ಮತ್ತು ಮೊದಲ ಮಹಡಿಯಲ್ಲಿ 17 ಅಂಗಡಿಗಳು ಸೇರಿದಂತೆ ಒಟ್ಟು 68 ಅಂಗಡಿಗಳ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ’ ಎಂದು ತಿಳಿಸಿದರು.

‘ಮೂಡಲಗಿ ಪಟ್ಟಣದ ಅಭಿವೃದ್ಧಿಗಾಗಿ ಅನೇಕ ಹೊಸ ಹೊಸ ಯೋಜನೆಗಳನ್ನು ಕಾರ್ಯಗತ ಮಾಡಲಾಗುತ್ತಿದೆ. ಆದರೆ ಈಗಿರುವ ಕಾಂಗ್ರೆಸ್ ಸರ್ಕಾರವು ಯಾವುದೇ ತೆರನಾದ ಅನುದಾನ ನೀಡುತ್ತಿಲ್ಲ. ಹೀಗಾಗಿ ಅಭಿವೃದ್ಧಿ ಕಾರ್ಯಗಳು ನಿಧಾನ ಗತಿಯಲ್ಲಿ ನಡೆಯುತ್ತಿವೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.

‘15ನೇ ಹಣಕಾಸು ಯೋಜನೆಯಲ್ಲಿ ₹1.13 ಕೋಟಿ ವೆಚ್ಚದ ಕಾಮಗಾರಿಗಾಗಿ ಈಗಾಗಲೇ ಟೆಂಡರ್ ಕರೆಯಲಾಗಿದೆ. ಇದರಲ್ಲಿ ಪಟ್ಟಣದಲ್ಲಿರುವ ರಸ್ತೆಗಳು, ಒಳಚರಂಡಿ ನಿರ್ಮಾಣ ಮತ್ತು ಘನತ್ಯಾಜ್ಯ ವಿಲೇವಾರಿ ಘಟಕದ ಕಂಪೌಂಡ್ ನಿರ್ಮಾಣ ಸೇರಿದೆ. ಕುಡಿಯುವ ನೀರಿಗಾಗಿ ₹49.80 ಲಕ್ಷ ಟೆಂಡರ್ ಕರೆಯಲಾಗಿದೆ’ ಎಂದರು.

ರಸ್ತೆ ಅಭಿವೃದ್ಧಿಗಾಗಿ ₹65.20 ಲಕ್ಷ ಮೊತ್ತದ ಟೆಂಡರ್ ಕರೆಯಲಾಗಿದೆ. ಐಎಸ್ ಡಬ್ಲ್ಯೂಎಂ ಘಟಕದ ಯೋಜನೆಗಾಗಿ ₹1.02 ಕೋಟಿ ಮೊತ್ತದ ಟೆಂಡರ್ ಕರೆಯಲಾಗಿದೆ ಎಂದರು.

ಶಾಸಕರು ಪುರಸಭೆ ಸದಸ್ಯರೊಂದಿಗೆ ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಸಭೆಯನ್ನು ನಡೆಸಿದರು. ಇದೇ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಪುರಸಭೆಯಿಂದ ಸತ್ಕರಿಸಲಾಯಿತು. ಪುರಸಭೆಯ ಎಲ್ಲ ಸದಸ್ಯರು, ಮುಖಂಡರು, ಮುಖ್ಯಾಧಿಕಾರಿ ತುಕಾರಾಮ ಮಾದರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.