ಮೂಡಲಗಿ: ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಕಾರ್ಯಕರ್ತರು ಪ್ರತಿ ಮತಗಟ್ಟೆಗಳಲ್ಲಿ ಸರ್ಕಾರದ ಯೋಜನೆಗಳನ್ನು ಮತದಾರರಿಗೆ ಮನವರಿಕೆ ಮಾಡಿ ಕೊಡಬೇಕು’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.

ತಾಲ್ಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಬಿಜೆಪಿ ಅರಭಾವಿ ಮಂಡಲ ಏರ್ಪಡಿಸಿದ್ದ ಗಾಂವ್-ಚಲೋ ಅಭಿಯಾನದಲ್ಲಿ ಮಾತನಾಡಿ, ಮೋದಿಯವರನ್ನು ಮತ್ತೋಮ್ಮೆ ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪ ಎಲ್ಲರದಾಗಿದೆ. ಈ ನಿಟ್ಟಿನಲ್ಲಿ ಅಭಿಯಾನವನ್ನು ಪ್ರತಿ ಮತಗಟ್ಟೆ ಮಟ್ಟದಲ್ಲಿ ಆಯೋಜನೆ ಮಾಡಲಾಗಿದೆ ಎಂದರು.

ಮತಗಟ್ಟೆಗಳಲ್ಲಿ ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸ ಮಾಡಬೇಕು. ಪೇಜ್ ಪ್ರಮುಖರನ್ನು ನಿಯುಕ್ತಿಗೊಳಿಸಬೇಕು. ಜೊತೆಗೆ ಮತಗಟ್ಟೆಗಳಲ್ಲಿ ಸಮಿತಿ ಸಭೆಗಳನ್ನು ನಡೆಸಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತುಕ್ಕಾನಟ್ಟಿ ಗ್ರಾಮದ ಮನೆ-ಮನೆಗೆ ತೆರಳಿ ಮೋದಿ ಸರ್ಕಾರದ ಸಾಧನೆಗಳ ಕರಪತ್ರಗಳನ್ನು ವಿತರಿಸಿದರು. ಗ್ರಾಮದ 10 ರಿಂದ 18ರವ ರೆಗಿನ ಒಟ್ಟು 9 ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮತಗಟ್ಟೆಗಳ ಪ್ರಮುಖರೊಂದಿಗೆ ಲೋಕಸಭಾ ಚುನಾವಣೆಯ ಸಂಬಂಧ ಚರ್ಚಿಸಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ, ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ತುಕ್ಕಾನಟ್ಟಿ ಗ್ರಾ.ಪಂ ಅಧ್ಯಕ್ಷೆ ಅಕ್ಕವ್ವ ಅರಭಾವಿ, ಪಿಕೆಪಿಎಸ್ ಅಧ್ಯಕ್ಷ ಸಿದ್ದಪ್ಪ ಹಮ್ಮಣವರ, ಅಜ್ಜಪ್ಪ ಮನ್ನಿಕೇರಿ, ಗುರುನಾಥ ಕಂಕಣವಾಡಿ, ಡಾ. ವಸಂತ ನಾಯಿಕವಾಡಿ, ಸುನಂದಾ ಭಜಂತ್ರಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.