ಬೆಳಗಾವಿ: ನಗರ ಹಾಗೂ ಜಿಲ್ಲೆಯ ವಿವಿಧೆಡೆ ವಶಪಡಿಸಿಕೊಂಡ ₹25.94 ಲಕ್ಷ ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ಶುಕ್ರವಾರ ನಾಶಪಡಿಸಲಾಯಿತು.

ನ್ಯಾಯಾಲಯದ ಆದೇಶದಂತೆ ನಗರ ಪೊಲೀಸ್ ಕಮಿಷನರ್ ಡಾ.ಎಂ.ಬಿ. ಬೋರಲಿಂಗಯ್ಯ ಹಾಗೂ ಎಸ್ಪಿ ಡಾ.ಸಂಜೀವ ಪಾಟೀಲ ಅವರ ನೇತೃತ್ವದಲ್ಲಿ ಗಾಂಜಾ ಹಾಗೂ ಇತರ ಮಾದಕ ವಸ್ತುಗಳನ್ನು ನಾಶ ಮಾಡಲಾಯಿತು. ಸವದತ್ತಿ ತಾಲ್ಲೂಕಿನ ಹಾರೂಗೊಪ್ಪ ಗ್ರಾಮದ ಬಳಿ ಇರುವ ಬೆಲಗಮ್ ಗ್ರೀನ್ ಎನ್ವಿರಾನ್ಮೆಂಟಲ್ ಮ್ಯಾನೇಜ್‌ಮೆಂಟ್ ಕಾರ್ಖಾನೆಯಲ್ಲಿ ಇವುಗಳಿಗೆ ಬೆಂಕಿ ಸ್ಪರ್ಶ ಮಾಡಲಾಯಿತು.

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ 26 ಪ್ರಕರಣಗಳನ್ನು ದಾಖಲಿಸಿ, ₹6.20 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಅದೇ ರೀತಿ ಜಿಲ್ಲೆ ವಿವಿಧ ಠಾಣೆಗಳಲ್ಲಿ 39 ಪ್ರಕರಣ ದಾಖಲಿಸಿ ₹19.74 ಲಕ್ಷ ಬೆಲೆಬಾಳುವ ಮಾದಕ ವಸ್ತುಗಳನ್ನ ವಶಕ್ಕೆ ಪಡೆಯಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.