ರಾಯಬಾಗ (ಬೆಳಗಾವಿ ಜಿಲ್ಲೆ): ಪಟ್ಟಣದ ಬಸ್ ನಿಲ್ದಾಣದ ಮೆಟ್ಟಿಲುಗಳ ಬಳಿ NWKRTC ಸಾರಿಗೆ ನಿಯಂತ್ರಕರೊಬ್ಬರು ಬುಧವಾರ ನೇಣಿಗೆ ಶರಣಾಗಿದ್ದಾರೆ.

ಶಿವಾನಂದ ಭಜಂತ್ರಿ (48) ಆತ್ಮಹತ್ಯೆ ಮಾಡಿಕೊಂಡವರು. ನಿಲ್ದಾಣದ ಮೇಲಂತಸ್ತಿಗೆ ಹೋಗಲು ಇರುವ ಮೆಟ್ಟಿಲುಗಳ ಬಳಿ, ಎತ್ತರದ ಕಿಟಕಿಗೆ ಹಗ್ಗ ಹಾಕಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.

ಈ ಮೆಟ್ಟಿಲುಗಳ ಮೇಲೆ ಜನ ಓಡಾಡುತ್ತಿರಲಿಲ್ಲ. ಹೀಗಾಗಿ ಘಟನೆ ಯಾವಾಗ ನಡೆಯಿತು ಯಾರಿಗೂ ಗೊತ್ತಾಗಿಲ್ಲ. ಬುಧವಾರ ಬೆಳಿಗ್ಗೆ ಸಿಬ್ಬಂದಿ ಕೆಲಸಕ್ಕೆ

ಬಂದಾಗ ಬಹಿರಂಗವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಶಿವಾನಂದ ಅವರು ಸುಮಾರು ₹25 ಲಕ್ಷದಷ್ಟು ಸಾಲ ಮಾಡಿದ್ದರು. ಇದರಿಂದ ಚಿಂತೆಗೀಡಾಗಿದ್ದರು' ಎಂದು ಅವರ ಸಹೋದ್ಯೋಗಿಗಳು ಮಾಹಿತಿ ನೀಡಿದ್ದಾರೆ.

ಸಾವಿಗೆ ನಿಖರ ಕಾರಣ ಇನ್ನೂ ಗೊತ್ತಾಗಿಲ್ಲ. ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.