ಬೆಳಗಾವಿ: ‘ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ ‘2ಎ’ ಮೀಸಲಾತಿ ನೀಡಬೇಕು ಎಂಬ ಬೇಡಿಕೆಗೆ ಸರ್ಕಾರ ಸ್ಪಂದಿಸದ ಕಾರಣ ಡಿ.13ರಂದು ಬೆಳಗಾವಿಯಲ್ಲಿ ಪ್ರತಿಭಟನೆಗೆತೀರ್ಮಾನಿಸಿದ್ದೇವೆ’ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

‘ಅಂದು ಗಾಂಧಿ ಭವನದಿಂದ ಚನ್ನಮ್ಮನ ವೃತ್ತದವರೆಗೆ ಪಾದಯಾತ್ರೆ ನಡೆಸಲಾಗುವುದು. ಅಗತ್ಯವಿದ್ದರೆ ಸುವರ್ಣ ವಿಧಾನಸೌಧದವರೆಗೂ ಪಾದಯಾತ್ರೆ ಕೈಗೊಳ್ಳಲಾಗುವುದು’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

‘ಸಮುದಾಯದ ಸಚಿವರು ಮತ್ತು ಶಾಸಕರು ನಮ್ಮ ಬೇಡಿಕೆ ಬಗ್ಗೆ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದರು. ಉತ್ತರ ಕರ್ನಾಟಕದಲ್ಲಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಕಾರಣ ಬೆಳಗಾವಿಯಲ್ಲಿ ಸಭೆ ನಡೆಸಬೇಕೆಂದು ಕೋರಿದ್ದರು. ಆದರೆ, ಮುಖ್ಯಮಂತ್ರಿ ಬೆಂಗಳೂರಿನಲ್ಲಿ ಸಭೆ ನಡೆಸಲು ಒಲವು ತೋರಿದ್ದಾರೆ. ಅವರು ಡಿ. 13ರೊಳಗೆ ಪಂಚಮಸಾಲಿ ಸಮುದಾಯದ ಸಚಿವರು, ಶಾಸಕರ ಸಭೆ ಕರೆದು, ಮೀಸಲಾತಿ ನೀಡುವ ಕುರಿತು ಅಂತಿಮ ನಿರ್ಧಾರ ಪ್ರಕಟಿಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.