ಬೆಳಗಾವಿ: ಇಲ್ಲಿನ ಉದ್ಯಮಭಾಗದ ಕೈಗಾರಿಕಾ ಪ್ರದೇಶದ ನಿವಾಸಿ, ರೀಲ್ಸ್ ಮೂಲಕ ಹೆಸರಾಗಿದ್ದ ಗರ್ಭಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಶುಕ್ರವಾರ ರಾತ್ರಿ ಅವರು ಮೃತಪಟ್ಟಿರಬಹುದು. ಪತಿಯೇ ಕೊಲೆ ಮಾಡಿದ್ದಾನೆ ಎಂದು ಮೃತಳ ತವರು ಮನೆಯವರು ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರು ಮೂಲದ ಮಂಜುಳಾ ಗದ್ದಿಹೊಳಿ (22) ಮೃತರು. ಇವರ ಪತಿ ಬೆಳಗಾವಿಯ ಬೋರೇಶ ಗದ್ದಿಹೊಳಿ (24) ಹಾಗೂ ಕುಟುಂಬದವರು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಎರಡು ತಂಡ ರಚಿಸಲಾಗಿದೆ ಎಂದು ಡಿಸಿಪಿ ರೋಹನ್ ಜಗದೀಶ ತಿಳಿಸಿದ್ದಾರೆ.

ಮಂಜುಳಾ ಹಾಗೂ ಬೋರೇಶ ಇನ್ಸ್ಟಾಗ್ರಾಂನಲ್ಲಿ ರೀಲ್ಸ್ ಮಾಡುವ ಮೂಲಕ ಪರಿಚಯವಾಗಿ, ಪ್ರೀತಿಸುತ್ತಿದ್ದರು. ಇವರ ಮದುವೆಗೆ ಮಂಜುಳಾ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಇಬ್ಬರೂ ಮನೆ ಬಿಟ್ಟು ಹೋಗಿ ಮದುವೆ ಮಾಡಿಕೊಂಡಿದ್ದರು. ಇಲ್ಲಿನ ಕೈಗಾರಿಕಾ ಪ್ರದೇಶದ ಮನೆಯಲ್ಲಿ ದಂಪತಿ ವಾಸವಾಗಿದ್ದರು. ಸದ್ಯ ಮಂಜುಳಾ ಮೂರು ತಿಂಗಳ ಗರ್ಭಿಣಿ ಆಗಿದ್ದರು. ಮಂಜುಳಾ ಉಸಿರುಗಟ್ಟಿ ಸಾವನ್ನಪ್ಪಿದ್ದು ಗೊತ್ತಾಗಿದೆ. ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ ಎಂದು ಡಿಸಿಪಿ ತಿಳಿಸಿದರು.

‘ಮಂಜುಳಾಗೆ ಆರಂಭದಿಂದಲೂ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗುತ್ತಿತ್ತು. ಅವಳ ಪತಿ ಹಾಗೂ ಮನೆಯವರು ಕೊಲೆ ಮಾಡಿ, ಇದನ್ನು ಆತ್ಮಹತ್ಯೆ ಎಂಬಂತೆ ಬಿಂಬಿಸುತ್ತಿದ್ದಾರೆ ಎಂದು ಗೃಹಿಣಿಯ ಕುಟುಂಬದವರು ದೂರು ನೀಡಿದ್ದಾರೆ. ಹೀಗಾಗಿ, ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ’ ಎಂದರು.

‘ಮದುವೆಯಾಗಿ ಏಳು ವರ್ಷದೊಳಗೆ ಗೃಹಿಣಿ ಸಾವು ಸಂಭವಿಸಿದರೆ ಅದನ್ನು ವಿಶೇಷ ಪ್ರಕರಣ ಎಂದು ತನಿಖೆ ಮಾಡಬೇಕಾಗುತ್ತದೆ. ಕೌಟುಂಬಿಕ ಕಿರುಕುಳ, ಕೊಲೆಯ ಶಂಕೆ ಅಡಿ ಈ ಪ್ರಕರಣವನ್ನೂ ಪರಿಗಣಿಸಲಾಗುವುದು’ ಎಂದರು.

ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.