ಬೆಳಗಾವಿ: ‘ವಾಹನ ಚಾಲಕರು, ಡೇಟಾ ಆಪರೇಟರ್ಗಳು ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿ ಹೊರಗುತ್ತಿಗೆ ನೌಕರರ ಸಂಘದವರು ಸುವರ್ಣ ವಿಧಾನಸೌಧ ಸಮೀಪ ಬುಧವಾರ ಪ್ರತಿಭಟನೆ ನಡೆಸಿದರು.

‘ತಲಾ 500 ಜನಸಂಖ್ಯೆಗೆ ಒಬ್ಬರಂತೆ ಪೌರಕಾರ್ಮಿಕರನ್ನು ನಿಯೋಜಿಸಬೇಕು. ಬಾಕಿ ಉಳಿದಿರುವ ಪೌರಕಾರ್ಮಿಕರ ಹುದ್ದೆಗಳ 2ನೇ ಹಂತದ ನೇರ ನೇಮಕಾತಿಗೆ ಚಾಲನೆ ಕೊಡಬೇಕು’ ಎಂದು ಒತ್ತಾಯಿಸಿದರು.

‘ಚಾಲಕರಿಗೂ ಬೆಳಗಿನ ಉಪಹಾರ, ವಿಮೆ, ಆರೋಗ್ಯ ತಪಾಸಣೆ ಸೌಲಭ್ಯ ಕಲ್ಪಿಸಬೇಕು. ಉಚಿತವಾಗಿ ಮನೆಗಳನ್ನು ಒದಗಿಸಬೇಕು. ಕಾಲಕಾಲಕ್ಕೆ ಪೌರಾಡಳಿತ ಇಲಾಖೆಯ ವೃಂದ ಹಾಗೂ ನೇಮಕಾತಿ ನಿಯಮಾವಳಿ ಪರಿಷ್ಕರಿಸಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.