ಸವದತ್ತಿ: ವಿದ್ಯಾಭ್ಯಾಸಕ್ಕಾಗಿ ನಿತ್ಯ ವಿವಿಧೆಡೆ ತೆರಳುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಬಸ್‍ಗಳ ಕೊರತೆಯಿಂದ ಅನುಭವಿಸುತ್ತಿರುವ ಸಮಸ್ಯೆ ಕುರಿತು ಚರ್ಚಿಸಲು ಶಾಸಕ ವಿಶ್ವಾಸ್ ವೈದ್ಯ ಇಲ್ಲಿನ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಸಾರಿಗೆ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದರು.

ಶಾಸಕ ವಿಶ್ವಾಸ್ ವೈದ್ಯ ಮಾತನಾಡಿ, ರಾಜ್ಯ ಸರ್ಕಾರದ ಶಕ್ತಿ ಯೋಜನೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪುಣ್ಯ ಕ್ಷೇತ್ರ ಹಾಗೂ ಪ್ರೇಕ್ಷಣೀಯ ಸ್ಥಳಗಳಿಗೆ ಮಹಿಳೆಯರು ಉತ್ಸಾಹದಿಂದ ಪ್ರಯಾಣ ಮಾಡುತ್ತಿದ್ದಾರೆ. ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಲು ಆಯ್ದ ದಿನಗಳಲ್ಲಿ ಜನದಟ್ಟಣೆ ಹೆಚ್ಚುತ್ತಿದೆ. ಸಮರ್ಪಕ ಮತ್ತು ನಿಗದಿತ ಸಮಯಕ್ಕೆ ಬಸ್ ಸೇವೆ ಒದಗಿಸಲು ಆದೇಶಿಸಿದರು.

ಶಾಲಾ– ಕಾಲೇಜುಗಳಿಗೆ ನಿಗದಿತ ಸಮಯದಲ್ಲಿ ವಿದ್ಯಾರ್ಥಿಗಳು ತಲುಪುವಂತೆ ಬಸ್ ಸೌಲಭ್ಯ ಒದಗಿಸಲು ಶೀಘ್ರ ಕ್ರಮವಹಿಸಿ ಎಂದು ಡಿಪೊ ವ್ಯವಸ್ಥಾಪಕ ಕಿರಣ ಮದಿ ಅವರಿಗೆ ಸೂಚಿಸಿದರು.

ಪಿಐ ಕರುಣೇಶಗೌಡ ಜೆ., ಪಿಎಸ್‍ಐ ಆನಂದ ಕ್ಯಾರಕಟ್ಟಿ, ಸಾರಿಗೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.