ಬೆಳಗಾವಿ: ‘ಪುಣೆ-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಆರಂಭಿಸಲು ನಡೆಸಿದ ಪ್ರಯತ್ನ ಈಗ ಸಾಕಾರಗೊಂಡಿದೆ. ಹುಬ್ಬಳ್ಳಿವರೆಗೆ ಸೇವೆ ವಿಸ್ತರಣೆಗೊಂಡಿದ್ದು, ಸೆ.15ರಂದು ಪ್ರಧಾನಿ ನರೇಂದ್ರ ಮೋದಿ ರೈಲಿಗೆ ಚಾಲನೆ ನೀಡಲಿದ್ದಾರೆ’ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದರು.

ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಲವು ತಿಂಗಳ ಹಿಂದೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿಯಾಗಿ, ಪುಣೆ-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಆರಂಭಿಸಬೇಕು. ಬೆಂಗಳೂರು-ಧಾರವಾಡ ವಂದೇ ಭಾರತ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದೆ. ಈಗ ಪುಣೆ–ಬೆಳಗಾವಿ-ಹುಬ್ಬಳ್ಳಿ ವಂದೇ ಭಾರತ್ ರೈಲು ಸೇವೆ ಆರಂಭವಾಗಿದೆ. ಅಂದು ಬೆಳಗಾವಿ ನಿಲ್ದಾಣದಲ್ಲೂ ಕಾರ್ಯಕ್ರಮ ಆಯೋಜಿಸಿ, ರೈಲು ಸ್ವಾಗತಿಸಲಾಗುವುದು’ ಎಂದರು.

‘ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಣೆಗೆ ಎದುರಾಗಿದ್ದ ಅಡೆ–ತಡೆಗಳೆಲ್ಲ ಈಗ ನಿವಾರಣೆಯಾಗಿವೆ. ಆ ರೈಲನ್ನು ಬೆಳಗಾವಿಗೆ ವಿಸ್ತರಿಸಲು ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದರು.

‘ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ನಿರ್ಮಾಣಕ್ಕಾಗಿ ಭೂಸ್ವಾಧೀನ ಒಂದೆರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಕಾಮಗಾರಿ ಶೀಘ್ರ ಆರಂಭವಾಗಲಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.