ಬೆಳಗಾವಿ: ‘ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಸಚಿವ ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳಬೇಕು' ಎಂದು ಆಗ್ರಹಿಸಿ ಘಟಪ್ರಭಾದ ಅವರ ಬೆಂಬಲಿಗರು ಇಲ್ಲಿನ ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಒಂಟೆಗಳ ಮೇಲೆ ಮೆರವಣಿಗೆ ನಡೆಸಿ ಗುರುವಾರ ಪ್ರತಿಭಟನೆ ನಡೆಸಿದರು.

‘ನಮ್ಮ ನಾಯಕರ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ. ಅವರನ್ನು ಸಂಕಷ್ಟಕ್ಕೆ ಸಿಲುಕಿಸಲಾಗಿದೆ. ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಕೆಲಸಗಳು ತೆರೆ–ಮರೆಯಲ್ಲಿ ನಡೆಯುತ್ತಿವೆ. ಸಾಮಾಜಿಕ ಹಾಗೂ ರಾಜಕೀಯವಾಗಿ ಹೆಸರು ಕೆಡಿಸುವಂತಹ ಪ್ರಯತ್ನಗಳನ್ನು ಕೆಲವರು ಮಾಡುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು ನಿರಾಧಾರವಾಗಿವೆ. ಹೀಗಾಗಿ, ಬಿಜೆಪಿ ಹೈಕಮಾಂಡ್ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಮುಖಂಡರಾದ ಅಶೋಕಕುಮಾರ ಅಸೋದೆ, ಶಿವಾನಂದ ಚೌಕಸಿ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.