ಬೆಳಗಾವಿ: ‘ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ರೂಪಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿ ರಮೇಶ ಜಾರಕಿಹೊಳಿ ಬೆಂಬಲಿಗರು ಮತ್ತು ಅಭಿಮಾನಿಗಳು ಭಾನುವಾರ ಪ್ರತಿಭಟನೆ ನಡೆಸಿದರು.

ಸಂಗೊಳ್ಳಿರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಅಣಕು ಶವಯಾತ್ರೆ ನಡೆಸಿ ಅದನ್ನು ದಹಿಸಿ, ಧಿಕ್ಕಾರದ ಘೋಷಣೆ ಕೂಗಿದರು.

‘ಸಿ.ಡಿ. ಪ್ರಕರಣದಲ್ಲಿರುವ ಯುವತಿಯ ಪೋಷಕರು, ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪಿಸಿದ್ದಾರೆ. ನಮ್ಮ ಮಗಳನ್ನು ಒತ್ತೆಯಾಗಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇದರೊಂದಿಗೆ ಇಡೀ ಪ್ರಕರಣದಲ್ಲಿ ಷಡ್ಯಂತ್ರ ರೂಪಿಸಿದ ಮಹಾನಾಯಕ ಯಾರು ಎನ್ನುವುದು ಎಲ್ಲರಿಗೂ ಗೊತ್ತಾಗಿದೆ. ಹೀಗಾಗಿ, ಶಿವಕುಮಾರ್ ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು. ಯುವತಿಯನ್ನು ಮುಂದಿಟ್ಟುಕೊಂಡು ಕೀಳು ರಾಜಕಾರಣ ಮಾಡಿರುವ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ನೂರಾರು ಮಂದಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.