ಬೆಳಗಾವಿ: ‘ನಮ್ಮಣ್ಣ, ಹಿರಿಯ ಶಾಸಕ ಉಮೇಶ ಕತ್ತಿ ಡೈಮಂಡ್. ಅವರಿಗೆ ಈ ಬಾರಿಯ ಸಚಿವ ಸಂಪುಟ ವಿಸ್ತರಣೆ ವೇಳೆ ಮಂತ್ರಿ ಸ್ಥಾನ ಸಿಗುತ್ತದೆ ಎಂಬ ವಿಶ್ವಾಸ ನನಗಿದೆ’ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.

ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಈ ಬಾರಿ ಬಿಜೆಪಿ ಸರ್ಕಾರ ರಚನೆಯಾಗಲು 17 ಮಂದಿ ಹೊರಗಿನಿಂದ ಬಂದವರು ಕಾರಣ. ಅವರಿಗೆ ಅವಕಾಶ ಕೊಡಬೇಕಿರುವುದರಿಂದ ನಮ್ಮಣ್ಣ ತ್ಯಾಗ ಮಾಡಿದ್ದಾರೆ. ಪಕ್ಷವು ನಮಗೆ ಇಷ್ಟೆಲ್ಲ ಕೊಟ್ಟಾಗ ನಾವೂ ಸ್ವಲ್ಪ ತ್ಯಾಗ ಮಾಡಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಪಕ್ಷದ ವರಿಷ್ಠರು ಸಹೋದರನಿಗೆ ಸೂಕ್ತ ಸ್ಥಾನಮಾನ ಕೊಡುತ್ತಾರೆ’ ಎಂದು ಪ್ರತಿಕ್ರಿಯಿಸಿದರು.

ಪ್ರತ್ಯೇಕವಾಗಿ ಮಾತನಾಡಿದ ಉಮೇಶ ಕತ್ತಿ, ‘ನನ್ನ ಅನುಭವ ಹಾಗೂ ಯೋಗ್ಯತೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುತಿಸುತ್ತಾರೆ. ಸಂಪುಟದಲ್ಲಿ ಸ್ಥಾನ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ. ಆದರೆ, ಇದಕ್ಕಾಗಿ ಲಾಬಿ ಮಾಡುವುದಕ್ಕೆ ಹೋಗುವುದಿಲ್ಲ’ ಎಂದು ಹೇಳಿದರು.

ಇದನ್ನೂ ಓದಿ... ಬೆಳಗಾವಿಡಿಸಿಸಿ ಬ್ಯಾಂಕ್:ರಮೇಶ ಕತ್ತಿ ಅಧ್ಯಕ್ಷ, ಸುಭಾಷ ಢವಳೇಶ್ವರ ಉಪಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.