ಬೆಳಗಾವಿ: ತಮಗೆ ಲ್ಯಾಪ್ಟಾಪ್ ವಿತರಣೆ ಮಾಡುವಂತೆ ಒತ್ತಾಯಿಸಿ ಆರ್ಸಿಯು ವಿದ್ಯಾರ್ಥಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರಿಗೆ ಮುತ್ತಿಗೆ ಹಾಕಿ ಬುಧವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ಹಿರೇಬಾಗೇವಾಡಿಯ ಮಲ್ಲಪ್ಪನಗುಡ್ಡದಲ್ಲಿ ಆರ್ಸಿಯು ಕ್ಯಾಂಪಸ್ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುವ ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದ ಮುಖ್ಯಮಂತ್ರಿಗೆ ವಿದ್ಯಾರ್ಥಿಗಳು ಮುತ್ತಿಗೆ ಹಾಕಿದರು.

ಪರಿಶಿಷ್ಟ ಜಾತಿ ಹಾಗೂ ಪಂಗಡದವರಾದ, ನಾಲ್ಕನೇ ಸೆಮಿಸ್ಟರ್ನಲ್ಲಿರುವ ನಮಗೆ ಲ್ಯಾಪ್ಟಾಪ್ ನೀಡಿಲ್ಲ. ನಾವು 316 ಮಂದಿ ಇದ್ದೇವೆ. ಕುಲಪತಿ, ಕುಲಸಚಿವರನ್ನು ಕೇಳಿದರೆ ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನ ಬಂದಿಲ್ಲ ಎನ್ನುತ್ತಿದ್ದಾರೆ. ಅವರಿಂದ ಸೂಕ್ತ ಸ್ಪಂದನೆ ಸಿಗುತ್ತಿಲ್ಲ ಎಂದು ಆರೋಪಿಸಿದರು.

ಸ್ನಾತಕೋತ್ತರ ಪದವಿ ನಾಲ್ಕನೇ ಸೆಮಿಸ್ಟರ್ ಮುಗಿಯಲು ಆರು ತಿಂಗಳಷ್ಟೆ ಬಾಕಿ ಇದೆ. ಆದರೂಈ ವರ್ಷ ಲ್ಯಾಪ್ಟಾಪ್ ನೀಡಿಲ್ಲ. ಪ್ರಾಜೆಕ್ಟ್ಗಳನ್ನು ಮಾಡಲು ಲ್ಯಾಪ್ಟಾಪ್ ಅತ್ಯಗತ್ಯವಾಗಿದೆ. ಹೀಗಾಗಿ ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಶೀಘ್ರವೇ ಕೊಡಿಸುತ್ತೇನೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.'ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಆದರೂ ಲ್ಯಾಪ್ಟಾಪ್ ಸಿಗುವವರೆಗೆ ಹೋರಾಡುತ್ತೇವೆ. ಡಿ.23ರಿಂದ ಕುಲಸಚಿವರ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸುತ್ತೇವೆ' ಎಂದು ವಿದ್ಯಾರ್ಥಿಗಳಾದ ಪರಶುರಾಮ ಮೂಕನವರ ಹಾಗೂ ಭರಮು ಕುರ್ಲಿ ತಿಳಿಸಿದರು.

ಇದನ್ನೂ ಓದಿ:ಬೆಳಗಾವಿ ಅಧಿವೇಶನ: ಪ್ರತಿಭಟನೆ ಕೈಬಿಟ್ಟ ದೃಶ್ಯ ಮಾಧ್ಯಮ ಪ್ರತಿನಿಧಿಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.