ಅಥಣಿ: ‘ಅಥಣಿ ಮತ್ತು ಕಾಗವಾಡ ಕ್ಷೇತ್ರದಾದ್ಯಂತ ₹ 290 ಕೋಟಿ ಅನುದಾನದಲ್ಲಿ ಹತ್ತು ಹಲವು ಕಾಮಗಾರಿಗಳು ಚಾಲನೆಯಲ್ಲಿವೆ. ಅದನ್ನು ನೋಡಿದರೆ ಖುಷಿಯಾಗುತ್ತದೆ’ ಎಂದು ಶಾಸಕ ಮಹೇಶ ಕುಮಠಳ್ಳಿ ಹೇಳಿದರು.

ತಾಲ್ಲೂಕು ಆಡಳಿತದಿಂದ ಭಾನುವಾರ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ಮುಂದೆಯೂ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರೊಂದಿಗೆ ಸೇರಿ ತಾಲ್ಲೂಕನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು’ ಎಂದರು.

‘ಪ್ರವಾಹದಿಂದಾಗಿ 26 ಹಳ್ಳಿಗಳು ಸಂಪೂರ್ಣ ಮುಳುಗಡೆಯಾಗಿ ಸಾಕಷ್ಟು ತೊಂದರೆಯಾಗಿದೆ. ಕಳೆದ ಮಾರ್ಚ್‌ನಲ್ಲಿ ಬರಗಾಲ ಎದುರಿಸಿದ್ದ ತಾಲ್ಲೂಕಿನ ರೈತರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಸರ್ಕಾರ ಸ್ಪಂದಿಸಿದೆ. ಇನ್ನೂ ಸ್ವಲ್ಪ ಹಣ ಬಿಡುಗಡೆಯಾಗುವುದು ಬಾಕಿ ಇದ್ದು, ಶೀಘ್ರದಲ್ಲೇ ದೊರೆಯಲಿದೆ’ ಎಂದು ತಿಳಿಸಿದರು.

ಮುಖಂಡ ಅರವಿಂದರಾವ ದೇಶಪಾಂಡೆ, ತಹಶೀಲ್ದಾರ್ ಎಂ.ಎನ್. ಬಳಗಾರ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕವಿತಾ ನಾಯಿಕ, ಸಿಪಿಐ ಶಂಕರಗೌಡ ಬಸನಗೌಡ ಇದ್ದರು.

ಎಇಇ ವೀರಣ್ಣ ವಾಲಿ ಸ್ವಾಗತಿಸಿದರು. ವಾವನ ಕುಲಕರ್ಣಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.