ಬೆಳಗಾವಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರವನ್ನು ನಗರದಲ್ಲೆ ಸ್ಥಾಪಿಸುವಂತೆ ಶಾಸಕ ಅನಿಲ ಬೆನಕೆ ಅವರು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರಿಗೆ ಬೆಂಗಳೂರಿನಲ್ಲಿ ಶುಕ್ರವಾರ ಮನವಿ ಸಲ್ಲಿಸಿದ್ದಾರೆ.

‘ಕೇಂದ್ರವನ್ನು ಸ್ಥಾಪಿಸುವ ಯೋಜನೆ ಕೈಬಿಟ್ಟು, ಬೇರೆಡೆ ಸ್ಥಳಾಂತರಿಸಲು ಯತ್ನಿಸುತ್ತಿರುವುದು ಗೊತ್ತಾಗಿದೆ. ಅದಕ್ಕೆ ಅವಕಾಶ ಕೊಡಬಾರದು’ ಎಂದು ಕೋರಿದ್ದಾರೆ.

‘ಜಿಲ್ಲೆಯು ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದ್ದು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಜಿಲ್ಲಾ ಮಟ್ಟದ ಎಲ್ಲ ಕೇಂದ್ರ ಕಚೇರಿಗಳೂ ಉತ್ತರ ಮತಕ್ಷೇತ್ರದಲ್ಲಿ ಬರುವುದರಿಂದ ಮತ್ತು ಜಿಲ್ಲೆಯು ಪ್ರಾದೇಶಿಕ ವಿಭಾಗದ ಕೇಂದ್ರವೂ ಆಗಿರುವುದರಿಂದ ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರವನ್ನು ಸ್ಥಳಾಂತರಿಸಬಾರದು’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.