ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭೂ ಕಬಳಿಕೆ | ಮೊದಲು ಸಾಕ್ಷ್ಯಾಧಾರ ನೀಡಲಿ: ಸತೀಶ ಜಾರಕಿಹೊಳಿ

Published : 4 ಅಕ್ಟೋಬರ್ 2024, 23:58 IST
Last Updated : 4 ಅಕ್ಟೋಬರ್ 2024, 23:58 IST
ಫಾಲೋ ಮಾಡಿ
Comments

ಬೆಳಗಾವಿ: ‘ಬೆಳಗಾವಿ ಸಚಿವರೊಬ್ಬರು ಭೂಕಬಳಿಕೆ ಮಾಡಿದ್ದಾರೆ’ ಎಂಬ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಚಿವರಾದ ಸತೀಶ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳಕರ ಅವರು ‘ಸೂಕ್ತ ಸಾಕ್ಷ್ಯಾಧಾರ ನೀಡಲಿ’ ಎಂದು ಆಗ್ರಹಿಸಿದರು.

‘ಭೂಕಬಳಿಕೆ ಯಾರು ಮತ್ತು ಎಲ್ಲಿ ಮಾಡಿದ್ದಾರೆ ಎಂಬುದನ್ನು ಸಂಪೂರ್ಣವಾಗಿ ಹೇಳಲಿ. ನಂತರ ಪ್ರತಿಕ್ರಿಯಿಸುವೆ’ ಎಂದು ಸತೀಶ ಜಾರಕಿಹೊಳಿ ತಿಳಿಸಿದರು.

‘ಆಧಾರ ರಹಿತ ಹೇಳಿಕೆಗೆ ಉತ್ತರಿಸುವ ಅಗತ್ಯ ಇಲ್ಲ. ಆಧಾರ ಸಹಿತ ಮಾತನಾಡಿದಾಗ, ನಾನು ಉತ್ತರಿಸುವೆ’ ಎಂದು ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT