ಬೆಳಗಾವಿ: ‘ತಾಲ್ಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಗೆ ರಾಜ್ಯ ಸರ್ಕಾರದ ವತಿಯಿಂದ ₹5 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

‘ಜತೆಗೆ, ನೊಂದ ಮಹಿಳೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ₹50 ಸಾವಿರ ಪರಿಹಾರ ಘೋಷಿಸಲಾಗಿದೆ’ ಎಂದು ಶುಕ್ರವಾರ ತಿಳಿಸಿದ್ದಾರೆ.

ಸಂತ್ರಸ್ತೆಗೆ ಸೂಕ್ತ ನೆರವು ನೀಡಲು ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೂಚಿಸಿದ್ದಾರೆ.

‘ಸಂತ್ರಸ್ತೆಗೆ ಅಗತ್ಯವಿರುವ ಎಲ್ಲಾ ಸವಲತ್ತುಗಳನ್ನು ಇಲಾಖೆಯಿಂದ ಒದಗಿಸಿಕೊಟ್ಟು, ಅವರಿಗೆ ನ್ಯಾಯ ಒದಗಿಸಿಕೊಡಲು ಬೇಕಾದ ಎಲ್ಲಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು’ ಎಂದೂ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.