ಬೆಳಗಾವಿ: ಇಲ್ಲಿನ ಹಳೆ ಬೆಳಗಾವಿ ಪ್ರದೇಶದ ಅಂಬೇಡ್ಕರ್ ಗಲ್ಲಿಯಲ್ಲಿ ನಡೆದಿದ್ದ ಚಾಲಕ ಜಯಪಾಲ ಮಸನು ಗರಾಣಿ (35) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ಕೈಗೊಂಡ ಶಹಾಪುರ ಠಾಣೆ ಪೊಲೀಸರು, ಕೇವಲ 24 ಗಂಟೆಗಳಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

‘ಜ್ಯೋತಿರಾಜ ಸಿದ್ರಾಯಿ ದೊಡ್ಡಮನಿ (24), ಅಕ್ಷಯ ಕೃಷ್ಣ ಕೋಲ್ಕಾರ (24), ಪ್ರಶಾಂತ ಯಲ್ಲಪ್ಪ ಕಳ್ಳಿಮನಿ (30), ಪ್ರಶಾಂತ ಬಸವಂತ ಗರಾಣಿ (28), ರೋಹಿತ್ ರಾಜೇಂದ್ರ ದೊಡ್ಡಮನಿ (23), ಶಿವರಾಜ ಅಲಿಯಾಸ್ ಸೋನ್ಯಾ ನಾಗೇಶ ದೊಡ್ಡಮನಿ (21) ಆರೋಪಿಗಳು. ಅಂಬೇಡ್ಕರ್ ಗಲ್ಲಿ ನಿವಾಸಿಗಳೆ ಆದ ಅವರನ್ನು ಗುರುವಾರ ತಡರಾತ್ರಿ ಬಂಧಿಸಲಾಗಿದೆ. ಅವರಿಂದ ರಕ್ತಸಿಕ್ತ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಡಿಸಿಪಿ ವಿಕ್ರಂ ಅಮಟೆ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

‘ಎಲ್ಲರೂ ಸ್ನೇಹದಿಂದಲೇ ಇದ್ದರು. ಹರಟೆ ಹೊಡೆಯುತ್ತಿದ್ದರು. ಆದರೆ, ಇತ್ತೀಚೆಗೆ ಸಂಬಂಧ ಹಾಳಾಗಿತ್ತು. ಆಗಾಗ ಜಗಳವೂ ನಡೆದಿತ್ತು. ಬುಧವಾರ ತಡರಾತ್ರಿ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ಹೋಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ವಿಚಾರಣೆ ಮುಂದುವರಿದಿದೆ’ ಎಂದು ಮಾಹಿತಿ ನೀಡಿದರು.

ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ರಾಘವೇಂದ್ರ ಹವಾಲ್ದಾರ ಮತ್ತು ಪಿಎಸ್ಐ ಮಂಜುನಾಥ ನಾಯಕ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.