ಗೋಕಾಕ: ‘ಸತ್ಯ, ನ್ಯಾಯ, ಪ್ರಾಮಾಣಿಕತೆಯ ಮಾತಿಗಿರುವ ಶಕ್ತಿಯನ್ನು ಜಾಗತಿಕವಾಗಿ ತಿಳಿಸಿಕೊಟ್ಟಿದ್ದಲ್ಲದೇ, ಪರಿಶ್ರಮದ ನೆಲೆಯಲ್ಲಿ ಸಮಾಜಮುಖಿಯಾದ ನೂರಾರು ಅಭಿವೃದ್ಧಿ ಕಾರ್ಯಗಳನ್ನು ಶ್ರೀ ಶ್ರೀ ಶ್ರೀ ರವಿಶಂಕರ ಗುರೂಜಿ ನೇತೃತ್ವದ ಅರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಮಾಡಲಾಗಿದೆ’ ಎಂದು ಸಂಸ್ಥೆಯ ಸಂಯೋಜಕ ವಿನಯ ಭಾರದ್ವಾಜ ಹೇಳಿದರು.

ಇಲ್ಲಿನ ಚನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ಮಂಗಳವಾರ ನಡೆದ ಶೂನ್ಯ ಸಂಪಾದನ ಮಠದ 16ನೇ ಶರಣ ಸಂಸ್ಕೃತಿ ಉತ್ಸವದಲ್ಲಿ ‘ಕಾಯಕಶ್ರೀ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಮಹಿಳೆಯರು, ಯುವಜಜನರು, ರೈತರ ಅಭಿವೃದ್ಧಿಗೆ ನೂರಾರು ಕಾರ್ಯ ಯೋಜನೆಗಳನ್ನು ಯಶಸ್ವಿಗೊಳಿಸಿದ ಕೀರ್ತಿ ಅವರದಾಗಿದೆ’ ಎಂದರು.

ಅರಭಾವಿಯ ಸಿದ್ಧಸಂಸ್ಥಾನಮಠದ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿದರು.

ವೆಬಿನಾರ್ ಮೂಲಕ ಮಾತನಾಡಿದ ರವಿಶಂಕರ ಗುರೂಜಿ ವೈಯಕ್ತಿಕ ಕಾರಣಗಳಿಂದಾಗಿ ಗೋಕಾಕಕ್ಕೆ ಬರಲಾಗಲಿಲ್ಲ. ಶೀಘ್ರದಲ್ಲೇ ನಗರಕ್ಕೆ ಭೇಟಿ ನೀಡುವೆ ಎಂಬ ಇಚ್ಛೆ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಶ್ರೀಮಠದಿಂದ ‘ಕಾಯಕ ಶ್ರೀ’ ಪ್ರಶಸ್ತಿಯನ್ನು ನಗರಕ್ಕೆ ಬಂದಾಗ ಪ್ರದಾನ ಮಾಡಲಾಗುವುದು ಎಂದು ಪ್ರಕಟಿಸಲಾಯಿತು. ಪ್ರಶಸ್ತಿ ಪತ್ರವನ್ನು ಜಾನಪದ ವಿದ್ವಾಸ ಡಾ. ಸಿ.ಕೆ.ನಾವಲಗಿ ವಾಚಿಸಿದರು.

ಶೂನ್ಯ ಸಂಪಾದನಮಠದ ಮುರುಘರಾಜೇಂದ್ರ ಸ್ವಾಮೀಜಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಪ್ರತಿನಿಧಿ ಸ್ವಾಮಿ ಶರಣು, ಬೆಂಗಳೂರಿನ ಬೋಸ್ಕ್ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಬಿ.ವಿ. ನವೀನ ಇದ್ದರು.

ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸಿದವರಯ ಮತ್ತು ದಾಸೋಹಿಗಳಾದ ಅನಿಲ ಪಟ್ಟೇದ, ಡಾ.ವಿಶ್ವನಾಥ ಶಿಂಧೋಳಿಮಠ ಅವರನ್ನು ಸನ್ಮಾನಿಸಲಾಯಿತು.

ಧಾರವಾಡದ ಅಲ್ಲಮ ವಚನಾಮೃತದ ರತಿಕಾ ನೃತ್ಯ ನಿಕೇತನ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಶಿಕ್ಷಕ ಎಸ್.ಕೆ. ಮಠದ ಸ್ವಾಗತಿಸಿದರು. ಶಿಕ್ಷಕ ರಾಮಪ್ಪ ಮಿರ್ಜಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.