ಹುಬ್ಬಳ್ಳಿ: 'ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ನನಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ' ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ವಿಶ್ವಾಸ ವ್ಯಕ್ತಪಡಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಟಿಕೆಟ್ ನೀಡುವ ವಿಚಾರದಲ್ಲಿ ಪಕ್ಷದ ಎಲ್ಲ ಪ್ರಮುಖರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ಅವರೆಲ್ಲ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ. ಶೇ 90ರಷ್ಟು ನನಗೇ ಟಿಕೆಟ್ ಸಿಗುವ ಸಾಧ್ಯತೆಯಿದೆ. ಕೊನೆ ಘಳಿಗೆಯಲ್ಲಿ ರಾಜಕೀಯ ಬೆಳವಣಿಗೆ ಏನೂ ಆಗಬಹುದು' ಎಂದರು.

'ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುವ ಇಚ್ಛೆಯಂತೂ ಇಲ್ಲ. ಯಾರಿಗೆ ಟಿಕೆಟ್ ಸಿಗುತ್ತದೆಯೋ ಅವರ ಪರ ಪ್ರಚಾರಕ್ಕೆ ಕರೆದರೆ ಹೋಗುತ್ತೇನೆ. ಇದು ನನ್ನ ರಾಜಕೀಯದ ಕೊನೆಯ ಹಂತ. ಮುಂಬರುವ ದಿನಗಳಲ್ಲಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ' ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.