ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಹಣಬರಹಟ್ಟಿಯ ಸರ್ಕಾರಿ ಪ್ರೌಢಶಾಲೆ ಕೇಂದ್ರದಿಂದ ಸೋರಿಕೆಯಾಗಿದೆ ಎನ್ನಲಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ, ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎನ್.ಪ್ಯಾಟಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶಿಕ್ಷಕರಿಂದ ಮಾಹಿತಿ ಕಲೆಹಾಕಿದರು.

ಈ ಕೇಂದ್ರದಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಿತು. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 191 ವಿದ್ಯಾರ್ಥಿಗಳ ಪೈಕಿ 175 ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ನಡೆಯುತ್ತಿರುವಾಗಲೇ ಈ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಶಿಕ್ಷಕರೇ ಇದಕ್ಕೆ ಸಹಕರಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

'ಹಣಬರಹಟ್ಟಿ ಕೇಂದ್ರಕ್ಕೆ ಭೇಟಿ ನೀಡಿ, ಎಲ್ಲ ಆಯಾಮಗಳಿಂದ ಪರಿಶೀಲಿಸಿದ್ದೇನೆ. ಆದರೆ, ಇದೇ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು ದೃಢಪಟ್ಟಿಲ್ಲ' ಎಂದು ಎಂ.ಎನ್.ಪ್ಯಾಟಿ 'ಪ್ರಜಾವಾಣಿ'ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.