ಬೆಳಗಾವಿ: ‘ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರ ಪ್ರಥಮ ಪುಣ್ಯಸ್ಮರಣೆ ಹಾಗೂ ಪುತ್ಥಳಿ ಅನಾವರಣ ಸಮಾರಂಭ ಇಲ್ಲಿನ ಸಾಂವಗಾಂವ ರಸ್ತೆಯ ಸುರೇಶ ಅಂಗಡಿ ಶಿಕ್ಷಣ ಪ್ರತಿಷ್ಠಾನದ ಆವರಣದಲ್ಲಿ ಸೆ.26ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ’ ಎಂದು ಸಂಸದೆ ಮಂಗಲಾ ಅಂಗಡಿ ತಿಳಿಸಿದ್ದಾರೆ.

‘ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸುವರು. ಶಾಸಕ ಜಗದೀಶ ಶೆಟ್ಟರ್ ಭಾಗವಹಿಸುವರು’.

‘ಮುಗಳಖೋಡ–ಜಿಡಗಾ ಮಠದ ಮುರುಘರಾಜೇಂದ್ರ ಸ್ವಾಮೀಜಿ, ಇಂಚಲದ ಶಿವಾನಂದ ಸ್ವಾಮೀಜಿ, ಮುರುಗೋಡ ದುರದುಂಡೇಶ್ವರ ಮಠದ ನೀಲಕಂಠ ಸ್ವಾಮೀಜಿ, ಕಾರಂಜಿ ಮಠದ ಗುರುಸಿದ್ದ ಸ್ವಾಮೀಜಿ, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ, ಹೂಲಿಯ ಉಮೇಶ ಶಿವಾಚಾರ್ಯ ಶ್ರೀ, ಗೋಕಾಕ ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಸ್ವಾಮೀಜಿ, ಮುತ್ನಾಳ ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು’.

‘ಸಚಿವರಾದ ಗೋವಿಂದ ಕಾರಜೋಳ, ಉಮೇಶ ಕತ್ತಿ, ಶಶಿಕಲಾ ಜೊಲ್ಲೆ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರು, ಕಾಂಗ್ರೆಸ್ ಮುಖಂಡ ಪ್ರಕಾಶ ಹುಕ್ಕೇರಿ ಮೊದಲಾದವರು ಪಾಲ್ಗೊಳ್ಳುವರು’ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.