ಕೌಜಲಗಿ: ಇತ್ತೀಚೆಗೆ ಮನೆ, ಅಂಗಡಿಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಸಾರ್ವಜನಿಕರು ಜಾಗೃತರಾಗಿರಬೇಕೆಂದು ಸಮೀಪದ ಕುಲಗೋಡ ಪೊಲೀಸ್ ಠಾಣೆಯ ಪಿಎಸ್‌ಐ ಗೋವಿಂದೇಗೌಡ ಪಾಟೀಲ ತಿಳಿಸಿದ್ದಾರೆ.

ಸಾರ್ವಜನಿಕರು ಹಾಗೂ ಅಂಗಡಿಗಳ ಮಾಲೀಕರು ತಮ್ಮ ಬೆಲೆಬಾಳುವ ವಸ್ತುಗಳು, ಹಣವನ್ನು ಭದ್ರವಾಗಿ ಇಟ್ಟುಕೊಳ್ಳಬೇಕು ಮತ್ತು ಬ್ಯಾಂಕ್ ಲಾಕರ್‌ಗಳಲ್ಲಿ ಇಡಬೇಕು. ಒಂದು ವೇಳೆ ಬೇರೆ ಊರಿಗೆ ಹೋದರೆ ಅಕ್ಕ ಪಕ್ಕದ ಮನೆಯವರಿಗೆ ಹಾಗೂ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.

ಅಪಚಿತ, ಸಂಶಯಾಸ್ಪದ ಜನರು ಕಂಡುಬಂದರೆ ಕೂಡಲೇ ಪೊಲೀಸ್ ಠಾಣೆಗೆ ಹಾಗೂ ಸಂಬಂಧಪಟ್ಟ ಬೀಟ್ ಪೊಲೀಸ್ ಸಿಬ್ಬಂದಿಗೆ ಹಾಗೂ 112 ನಂಬರ್‌ಗೆ ದೂರವಾಣಿಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿಗಾಗಿ ಕುಲಗೋಡ ಪೊಲೀಸ್ ಠಾಣೆಯ ದೂ.08334 222233 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.