ಬೆಳಗಾವಿ: ‘ಶಾಹೂ ನಗರದ ಮೂರನೇ ಕ್ರಾಸ್‌ನಲ್ಲಿ ನಿರ್ಮಾಣ ಹಂತದ ಮನೆಯಲ್ಲಿ ವಿದ್ಯುತ್ ತಗುಲಿ ಮೂವರು ಸಾವಿಗೀಡಾಗಿದ್ದು, ಇದಕ್ಕೆ ಹೆಸ್ಕಾಂ ಅಧಿಕಾರಿಗಳು, ಮನೆಯ ಮಾಲೀಕರು, ನಿರ್ಮಾಣ ಗುತ್ತಿಗೆ ಪಡೆದ ಗುತ್ತಿಗೆದಾರರ ನಿರ್ಲಕ್ಷ್ಯವೇ ಕಾರಣ ಎಂದು ಸ್ಪಷ್ಟವಾಗಿದೆ. ಮೂವರ ಮೇಲೂ ‘304’ ಅಡಿ ಪ್ರಕರಣ ದಾಖಲಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಎಸ್.ಎನ್. ಸಿದ್ದರಾಮಪ್ಪ ಹೇಳಿದರು.

ಇದನ್ನೂ ಓದಿ: ಬೆಳಗಾವಿ | ವಿದ್ಯುತ್ ಅವಘಡ: ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ: ಲಕ್ಷ್ಮೀ ಹೆಬ್ಬಾಳಕರ

ಶವಗಳನ್ನು ಆಸ್ಪತ್ರೆಗೆ ಸಾಗಿಸಿದ ನಂತರ ಸ್ಥಳ ಪರಿಶೀಲನೆ ನಡೆಸಿದ ಅವರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರು. ‘ವಿದ್ಯುತ್ ಸಂಪರ್ಕ ನೀಡುವಲ್ಲಿ ನಿಯಮ ಉಲ್ಲಂಘನೆ ಮಾಡಲಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಕೈಗೊಳ್ಳಬೇಕಾದ ಕ್ರಮಗಳನ್ನೂ ಗುತ್ತಿಗೆದಾರ ಕೈಗೊಂಡಿಲ್ಲ. ಮೇಲಾಗಿ, ಈ ಮನೆಯ ಮಾಲೀಕರಾದ ಸರೋಜಿನಿ ನರಸಿಂಗನವರ ಎನ್ನುವವರು ಬೆಂಗಳೂರಿನಲ್ಲಿ ಇದ್ದಾರೆ. ಈ ಮೂವರನ್ನೂ ದೋಷಿ ಮಾಡಲಾಗುವುದು’ ಎಂದರು.

‘ಈ ಸಾವಿನ ತನಿಖೆ ಮುಗಿದ ಬಳಿಕ ಕುಟುಂಬದವರಿಗೆ ಯಾವ ರೀತಿ ಪರಿಹಾರ ದೊರಕಿಸಲು ಸಾಧ್ಯ ಎಂಬುದರ ಕುರಿತೂ ಯೋಚಿಸಲಾಗುವುದು’ ಎಂದೂ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.