ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಮನೆಗೆ ಶುಕ್ರವಾರ ದಾಳಿ ಮಾಡಿದ ಅರಣ್ಯ ಇಲಾಖೆ ಅಧಿಕಾರಿಗಳು, ಹುಲಿ ಉಗುರಿನ ಪೆಂಡೆಂಟ್ ವಶಕ್ಕೆ ಪಡೆದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂಕರ ಕಲ್ಲೋಳಿಕರ, ಹೆಚ್ಚುವರಿ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ ತೇಲಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ಮಾಡಿ, ಮೃಣಾಲ್ ಹೆಬ್ಬಾಳಕರ ಅವರನ್ನು ವಿಚಾರಣೆ ನಡೆಸಿತು.

ಸಚಿವೆ ಲಕ್ಷ್ಮೀ ಅವರ ಪುತ್ರ ಮೃಣಾಲ್ ಕೊರಳಲ್ಲಿ ಧರಿಸಿದ್ದ ಚಿನ್ನಾಭರಣದಲ್ಲಿ ಹುಲಿ ಉಗುರಿನ ಪೆಂಡೆಂಟ್ ಇತ್ತು. ಇದರ ಫೋಟೊ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ನೋಟಿಸ್ ನೀಡಿ, ದಾಳಿ ಮಾಡಿದರು.
.ಹುಲಿ ಉಗುರು ಧರಿಸಿದ ಆರೋಪ ಪ್ರಕರಣ: ಜಗ್ಗೇಶ್ ಹೈಕೋರ್ಟ್ ಮೊರೆ.Tiger Claw: ನಕಲಿ ಹುಲಿ ಉಗುರು ಧರಿಸದಂತೆ ಸಚಿವ ಈಶ್ವರ ಖಂಡ್ರೆ ಮನವಿ.
'ನನ್ನ ಮದುವೆಯ ಸಮಾರಂಭದಲ್ಲಿ ಆತ್ಮೀಯರು ನನಗೆ ಈ ಪೆಂಡೆಂಟ್ ಕಾಣಿಕೆ ನೀಡಿದ್ದಾರೆ. ಇದು ನಿಜವಾದ ಹುಲಿ ಉಗುರಿನದ್ದಲ್ಲ. ಪ್ಲಾಸ್ಟಿಕ್ ನಿಂದ ಮಾಡಿದ್ದು. ಈ ವಿಚಾರವಾಗಿ ಅರಣ್ಯಾಧಿಕಾರಿಗಳ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ' ಎಂದು ಮೃಣಾಲ್ ಹೇಳಿದರು.

ಮಾಹಿತಿ ಕಲೆಹಾಕಿ, ಪೆಂಡೆಂಟ್ ವಶಕ್ಕೆ ಪಡೆದ ಅಧಿಕಾರಿಗಳು ಅದನ್ನು ಎಫ್.ಎಸ್.ಎಲ್.ಗೆ ಕಳುಹಿಸುವುದಾಗಿ ತಿಳಿಸಿದರು.
.ಹುಲಿ ಉಗುರು ಬಳಕೆ | ದೂರು ನೀಡಿದರೆ ಸಿನಿಮಾ ನಟರ ವಿರುದ್ಧವೂ ಕ್ರಮ: ಸಚಿವ ಖಂಡ್ರೆ.ಹುಲಿ ಉಗುರು ಪ್ರಕರಣ: ಬಿಜೆಪಿ ಮುಖಂಡನ ಮನೆಯಲ್ಲಿ ಪರಿಶೀಲನೆ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.