ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಹೊರವಲಯದಲ್ಲಿರುವ ವಿಶ್ವರಾಜ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಉಮೇಶ ಕತ್ತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕೆಲವೇ ಕ್ಷಣಗಳಲ್ಲಿ ಪಾರ್ಥಿವ ಶರೀರ ಸ್ಥಳ ತಲುಪಲಿದೆ. ಈಗಾಗಲೇ ಅಪಾರ ಸಂಖ್ಯೆಯಲ್ಲಿ ಜನರು, ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಹೆದ್ದಾರಿ ಆಸುಪಾಸಿನಲ್ಲಿ ಅಪಾರ ಸಂಖ್ಯೆಯ ವಾಹನಗಳು ಕಿಲೋಮೀಟರ್ ವರೆಗೆ ಸಾಲಾಗಿ ನಿಂತಿವೆ.

ಹೃದಯಾಘಾತದಿಂದ ನಿಧನ

ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ವಿ. ಕತ್ತಿ (62) ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದರು.

ರಾತ್ರಿ ಶೌಚಾಲಯಕ್ಕೆ ತೆರಳಿದ್ದ ಅವರು ಅಲ್ಲಿಯೇ ಕುಸಿದುಬಿದ್ದಿದ್ದರು. ಹತ್ತು ನಿಮಿಷಗಳಾದರೂ ಹೊರ ಬರದಿದ್ದಾಗ ಕುಟುಂಬದವರು ಬಾಗಿಲು ತೆರೆದು ಒಳ ಹೋದಾಗ ಅಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿತ್ತು. ಬಳಿಕ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರನಿಗಾ ಘಟಕದಲ್ಲಿ ಇರಿಸಲಾಗಿತ್ತು. ತಡರಾತ್ರಿ ವೇಳೆಗೆ ಉಮೇಶ ಕತ್ತಿ ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಉಮೇಶ್ ಕತ್ತಿ ಅವರಿಗೆ ಪತ್ನಿ ಶೀಲಾ, ಮಗ ನಿಖಿಲ್, ಮಗಳು ಸ್ನೇಹಾ ಇದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ 1961ರ ಮಾರ್ಚ್ 14ರಂದು ಜನಿಸಿದ್ದ ಉಮೇಶ್ ಕತ್ತಿ ಅವರು ಬಿ.ಎ. ಪದವಿ ಪಡೆದಿದ್ದರು.

ಹುಕ್ಕೇರಿ ವಿಧಾನಸಭಾ ಕ್ಷೇತ್ರದಿಂದ 1985ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಆರು ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಮೂಲತಃ ಜನತಾ ಪರಿವಾರದವರಾದ ಕತ್ತಿ ಅವರು ನಂತರ ಬಿಜೆಪಿ ಸೇರಿದ್ದರು. 1996ರಿಂದ 1999ರವರೆಗೆ ಸಕ್ಕರೆ ಸಚಿವರಾಗಿ, 2008ರಿಂದ ಕೃಷಿ ಸಚಿವರಾಗಿ ಮತ್ತು 2010ರಿಂದ 2013ರವರೆಗೆ ಕೃಷಿ ಸಚಿವರಾಗಿದ್ದರು. 2021ರ ಆಗಸ್ಟ್ನಿಂದ ಅವರು ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.