ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮದುರ್ಗ: ಗ್ರಾಮ ಲೆಕ್ಕಾಧಿಕಾರಿ ಸಾಗಿಸುತ್ತಿದ್ದ ದಾಖಲೆ ಇಲ್ಲದ ₹1.10 ಕೋಟಿ ವಶ

Published 19 ಜುಲೈ 2024, 14:42 IST
Last Updated 19 ಜುಲೈ 2024, 14:42 IST
ಅಕ್ಷರ ಗಾತ್ರ

ರಾಮದುರ್ಗ: ತಾಲ್ಲೂಕಿನ ಹಲಗತ್ತಿ ಚೆಕ್‌ಪೋಸ್ಟ್‌ ಬಳಿ, ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಯಾವುದೇ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹1.10 ಕೋಟಿಗೂ ಅಧಿಕ ನಗದನ್ನು ರಾಮದುರ್ಗ ಪೊಲೀಸರು ಶುಕ್ರವಾರ ವಶಕ್ಕೆ ಪಡೆದರು.

ನಿಪ್ಪಾಣಿಯ ಗ್ರಾಮ ಲೆಕ್ಕಾಧಿಕಾರಿ, ರಾಮದುರ್ಗ ತಾಲ್ಲೂಕಿನ ಹೊಸೂರು ಗ್ರಾಮದ ವಿಠ್ಠಲ ಶಿವಪ್ಪ ಢವಳೇಶ್ವರ ಅವರು ತಮ್ಮ ಕಾರಿನಲ್ಲಿ ಈ ಹಣ ಸಾಗಿಸುತ್ತಿದ್ದರು. ರಾಮದುರ್ಗ ಮಾರ್ಗವಾಗಿ ಬಾಗಲಕೋಟೆ ಕಡೆಗೆ ಹಣ ಸಾಗಣೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ ಕಾರು ಪರಿಶೀಲನೆ ಮಾಡಿದ ಪೊಲೀಸರಿಗೆ ₹1,10,62,900 ನಗದು ಸಿಕ್ಕಿದೆ. ಹಣವನ್ನು ಪೊಲೀಸರು ವಶಕ್ಕೆ ಪಡೆದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದರು.

ರಾಮದುರ್ಗ ಡಿವೈಎಸ್ಪಿ ಎಂ. ಪಾಂಡುರಂಗಯ್ಯ ನೇತೃತ್ವದಲ್ಲಿ ಸಿಪಿಐ ಈರಣ್ಣ ಪಟ್ಟಣಶೆಟ್ಟಿ ನೇತೃತ್ವದ ತಂಡ ದಾಳಿ ಮಾಡಿದೆ. ಬೆಳಗಾವಿಯ ಆದಾಯ ತೆರಿಗೆ ಇಲಾಖೆಯ ಸಹಾಯಕ ನಿರ್ದೇಶಕ ಅಮಿತ ಶಿಂಧೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT