ಗೋಕಾಕ: ಹಿಂದಿನ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ (ಕೆಎಚ್ಡಿಸಿ)ದಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿದ್ದು, ಇದರ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯ ಅಧ್ಯಕ್ಷ ಶಿವಲಿಂಗ ಟಿರಕಿ ಆಗ್ರಹಿಸಿದರು.

ನೇಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬನಹಟ್ಟಿಯಿಂದ ಹುಬ್ಬಳ್ಳಿವರೆಗೆ ಹಮ್ಮಿಕೊಂಡ ಸ್ವಾಭಿಮಾನಿ ನೇಕಾರರ ಪಾದಯಾತ್ರೆಯ ನೇತ್ರತ್ವ ವಹಿಸಿ, ಇಲ್ಲಿನ ತಹಶೀಲ್ದಾರ್ ಕಚೇರಿಗೆ ಸೋಮವಾರ ಮನವಿ ಸಲ್ಲಿಸುವ ಪೂರ್ವ ಮಾತನಾಡಿದರು.

ನಿಗಮದಲ್ಲಿ ನಡೆದ ಅವ್ಯವಹಾರದ ಮರು ತನಿಖೆಯಾಗಬೇಕು. ಅಧಿಕಾರಿಗಳಿಗೆ ಶಿಕ್ಷೆಯಾದರೆ ಸಾಲದು ಅದರಲ್ಲಿ ಭಾಗಿಯಾದ ಜನಪ್ರತಿನಿಧಿಗಳಿಗೂ ಕಠಿಣ ಶಿಕ್ಷೆಯಾಗಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನೇಕಾರಿಕೆಯನ್ನು ಉಳಿಸಲು ಕಟ್ಟಡ ಕಾರ್ಮಿಕರ ಮಾದರಿಯಲ್ಲಿ ವೃತ್ತಿಪರ ನೇಕಾರರಿಗೆ ಕಾರ್ಮಿಕ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.

ಕಲ್ಲಪ್ಪ ಬಾಗೇವಾಡಿ, ರಮೇಶ ಮರಿಜಾಡರ, ಸೋಮಲಿಂಗ ಬಾಗೇವಾಡಿ, ಅಜೀತ ನವಲಾಯಿ, ರವಿ ಮರಿಜಾಡರ, ಜಗದೀಶ ಗುಲ್ಲ, ಅಶೋಕ ಗುಲ್ಲ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.