ಬೆಳಗಾವಿ: ‘ರಾಜ್ಯದಲ್ಲಿ ಎಲ್ಲೆಲ್ಲಿ ವಿಶ್ವವಿದ್ಯಾಲಯಗಳು ಇಲ್ಲವೋ ಆ ಜಿಲ್ಲೆಗಳಲ್ಲಿ ತ್ವರಿತವಾಗಿ ಸ್ಥಾಪಿಸಲಾಗುವುದು. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ತಲೆ ಎತ್ತಲಿರುವ ವಿಶ್ವವಿದ್ಯಾಲಯಗಳಲ್ಲಿ ಕುಲಪತಿಯೂ ಸೇರಿದಂತೆ ಗರಿಷ್ಠ 25 ಸಿಬ್ಬಂದಿ ಮಾತ್ರ ಇರಲಿದ್ದಾರೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ‘ಜ್ಞಾನಯಜ್ಞ ಫೆಲೋಶಿಪ್ ವಿತರಣೆ ಮತ್ತು ವಿದ್ಯುನ್ಮಾನ ಪ್ರಮಾಣಪತ್ರಗಳ ಸೇವಾ ವ್ಯವಸ್ಥೆ’ (ಎಲೆಕ್ಟ್ರಾನಿಕ್ ಡಾಕ್ಯುಮೆಂಟರಿ ಡೆಲಿವರಿ) ಹಾಗೂ ಟ್ರ್ಯಾಕಿಂಗ್ ವ್ಯವಸ್ಥೆಯ ಉದ್ಘಾಟನೆಯನ್ನು ಬುಧವಾರ ನೆರವೇರಿಸಿ ಅವರು ಬುಧವಾರ ಮಾತನಾಡಿದರು.

‘ನೂರಾರು ಎಕರೆ ವಿಶಾಲವಾದ ಕ್ಯಾಂಪಸ್‌ಗಳು ಈಗ ಅಪ್ರಸ್ತುತವಾಗುತ್ತಿವೆ. ಆಧುನಿಕ ತಂತ್ರಜ್ಞಾನವು ಸಮರ್ಥವಾಗಿದ್ದು, ಕಡಿಮೆ ಜಾಗದಲ್ಲಿ ವಿ.ವಿ.ಗಳನ್ನು ಸ್ಥಾಪಿಸಲು ಸಾಧ್ಯವಿದೆ. ದೊಡ್ಡ ವಿ.ವಿ.ಗಳ ಬದಲಿಗೆ ಪ್ರತಿ ಜಿಲ್ಲೆಗಳಲ್ಲೂ ವಿಶ್ವವಿದ್ಯಾಲಯಗಳು ಇರುವಂತೆ ನೋಡಿಕೊಳ್ಳುವುದಕ್ಕೆ ಸರ್ಕಾರ ಆದ್ಯತೆ ಕೊಟ್ಟಿದೆ’ ಎಂದು ಹೇಳಿದರು.

ಓದಿ:ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಸೇರಿ 15 ಕಾಂಗ್ರೆಸ್ ಸದಸ್ಯರ ಅಮಾನತು

‘ಬೆಂಗಳೂರಿನಲ್ಲಿರುವ ಯೂನಿವರ್ಸಿಟಿ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜನ್ನು (ಯುವಿಸಿಇ) ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ 10 ವರ್ಷಗಳ ಯೋಜನೆ ಹಾಕಿಕೊಳ್ಳಲಾಗಿದೆ’ ಎಂದು ತಿಳಿಸಿದರು.

‘120 ಎಕರೆ ವಿಶಾಲ ಜಾಗ ಹೊಂದಿರುವ ವಿಟಿಯು ಕೂಡ ಐಐಟಿ ಮಾದರಿಯಲ್ಲೇ ಬೆಳೆಯಬೇಕು. ಈ ನಿಟ್ಟಿನಲ್ಲಿ ಕುಲಪತಿ ಪ್ರೊ.ಕರಿಸಿದ್ದಪ್ಪ ಅವರು ತಿಂಗಳಲ್ಲಿ ಕ್ರಿಯಾಯೋಜನೆ ಸಿದ್ಧಪಡಿಸಿ ಸಲ್ಲಿಸಲು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದರು.

‘ರಾಜ್ಯದ 17 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಜಾಗತಿಕ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಲು ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳು ಸಹಜವಾಗಿಯೇ ಈ ಕಾಲೇಜುಗಳತ್ತ ಆಕರ್ಷಿತರಾಗುವಂತೆ ಅಭಿವೃದ್ಧಿಪಡಿಸಲಾಗುವುದು. ಹೆಚ್ಚಿನ ಸ್ವಾಯತ್ತ ನೀಡುವ ಜತೆಗೆ ಆಡಳಿತ ಮಂಡಳಿ ಸ್ಥಾಪಿಸಲಾಗುವುದು’ ಎಂದು ಮಾಹಿತಿ ನೀಡಿದರು.

ವಿಟಿಯು ಕುಲಪತಿ ಪ್ರೊ.ಕರಿಸಿದ್ಧಪ್ಪ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಕುಲಸಚಿವರಾದ ಪ್ರೊ.ಬಿ.ಈ. ರಂಗಸ್ವಾಮಿ, ಪ್ರೊ.ಎ.ಎಸ್. ದೇಶಪಾಂಡೆ ಉಪಸ್ಥಿತರಿದ್ದರು.

22 ವಿದ್ಯಾರ್ಥಿಗಳಿಗೆ ಫೆಲೋಶಿಪ್

ವಿಟಿಯು ಹಮ್ಮಿಕೊಂಡಿರುವ ಜ್ಞಾನಯಾನ ಫೆಲೋಶಿಪ್ ಕಾರ್ಯಕ್ರಮದಲ್ಲಿ ಸಚಿವರು, 22 ಸಂಶೋಧನಾ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಪತ್ರ ವಿತರಿಸಿದರು.

‘ಈ ಯೋಜನೆಯಲ್ಲಿ ಪ್ರತಿ ವಿದ್ಯಾರ್ಥಿಗೂ ತಿಂಗಳಿಗೆ ₹ 25 ಸಾವಿರ ನೀಡಲಾಗುವುದು. ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್, ಕಂಪ್ಯೂಟರ್ ಸೈನ್ಸ್, ನ್ಯಾನೊ ತಂತ್ರಜ್ಞಾನ, ಏರೋಸ್ಪೇಸ್ ಪ್ರೊಪಲ್ಶನ್ ಎಂಜಿನಿಯರಿಂಗ್ ಮೊದಲಾದ ವಿಭಾಗಗಳಲ್ಲಿ ಅಧ್ಯಯನ ಮಾಡುತ್ತಿರುವವರು ಇದ್ದಾರೆ’ ಎಂದು ತಿಳಿಸಿದರು.

ಎಲೆಕ್ಟ್ರಾನಿಕ್ ಡಾಕ್ಯುಮೆಂಟರಿ ಡೆಲಿವರಿ ವ್ಯವಸ್ಥೆ

‘ವಿಟಿಯು ಆರಂಭಿಸಿರುವ ಈ ಯೋಜನೆಯಲ್ಲಿ ವಿದ್ಯಾರ್ಥಿಗಳು ತಮಗೆ ಬೇಕಾದ ಪ್ರಮಾಣಪತ್ರ, ಸಂಭಾವ್ಯ ಪದವಿ ಪ್ರಮಾಣಪತ್ರ, ಅಂಕಪಟ್ಟಿ, ವರ್ಗಾವಣೆ ಪತ್ರ, ಹೆಸರು ಬದಲಾವಣೆ, ದಾಖಲಾತಿಗಳ ಪರಿಶೀಲನೆ, ಮಾಧ್ಯಮ ಆಯ್ಕೆ ಮೊದಲಾದ ಹತ್ತಾರು ಸೇವೆಗಳನ್ನು ಆನ್‌ಲೈನ್ ಮೂಲಕ ಸುಲಭವಾಗಿ ಪಡೆದುಕೊಳ್ಳಬಹುದು’ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.